1 Chronicles 9 (BOKCV2)
1 ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು. 2 ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು. 3 ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ, ಬೆನ್ಯಾಮೀನನ ಮಕ್ಕಳೂ, ಎಫ್ರಾಯೀಮ್, ಮನಸ್ಸೆ ಎಂಬವರ ಮಕ್ಕಳು ಯಾರೆಂದರೆ: 4 ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ. 5 ಶೇಲಾಹನರಲ್ಲಿಚೊಚ್ಚಲಮಗನಾದ ಅಸಾಯನು, ಅವನ ಪುತ್ರರು. 6 ಜೆರಹನ ಪುತ್ರರಲ್ಲಿಯೆಯೂವೇಲನೂ,ಅವನ ಸಹೋದರರೂ 690 ಮಂದಿ. 7 ಬೆನ್ಯಾಮೀನ್ಯರಲ್ಲಿಹಸ್ಸೆನುವಾಹನ ಮಗನು ಹೋದವ್ಯನ ಮಗನು ಮೆಷುಲ್ಲಾಮನ ಮಗ ಸಲ್ಲು, 8 ಯೆರೋಹಾಮನ ಮಗ ಇಬ್ನೇಯಾಹನೂ;ಮಿಕ್ರಿಯ ಮಗ ಉಜ್ಜೀಯ ಮಗ ಏಲಾನೂ;ಇಬ್ನಿಯನ ಮಗ ರೆಯೂವೇಲನ ಮಗ, ಶೆಫಟ್ಯನ ಮಗ ಮೆಷುಲ್ಲಾಮನೂ, 9 ಅವರ ಸಹೋದರರೂ ತಮ್ಮ ವಂಶಗಳ ಪ್ರಕಾರ 956 ಮಂದಿ. ಇವರೆಲ್ಲರು ತಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದರು. 10 ಯಾಜಕರಲ್ಲಿ ಯಾರೆಂದರೆಯೆದಾಯನೂ, ಯೆಹೋಯಾರೀಬನೂ, ಯಾಕೀನನೂ; 11 ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗ ಮೆರಾಯೋತನ ಮಗ ಚಾದೋಕನ ಮಗ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ; 12 ಮಲ್ಕೀಯನ ಮಗ ಪಷ್ಹೂರನ ಮಗ ಯೆರೋಹಾಮನ ಮಗ ಅದಾಯನು.ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ ಮೆಷುಲ್ಲಾಮನ ಮಗ ಯಹ್ಜೇರನ ಮಗ ಅದೀಯೇಲನ ಮಗ ಮಾಸೈಯನೂ; 13 ಅವರ ಸಹೋದರರೂ ತಮ್ಮ ಕುಟುಂಬಗಳಲ್ಲಿ ಯಜಮಾನರು 1,760 ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿಗಳಾಗಿದ್ದರು. 14 ಲೇವಿಯರಲ್ಲಿ ಯಾರೆಂದರೆ:ಮೆರಾರೀಯ ಪುತ್ರರಲ್ಲಿ ಒಬ್ಬನಾದ ಹಷ್ಷೂಬನ ಮಗ ಅಜ್ರೀಕಾಮನ ಮಗ ಹಷಬ್ಯನ ಮಗ ಶೆಮಾಯನೂ; 15 ಬಕ್ಬಕ್ಕರನೂ, ಹೆರೆಷನೂ, ಗಲಾಲನೂ, ಆಸಾಫನ ಮಗ, ಜಿಕ್ರಿಯ ಮಗ, ಮೀಕನ ಮಗ ಮತ್ತನ್ಯನೂ; 16 ಯೆದುತೂನನ ಮಗ, ಗಲಾಲನ ಮಗ, ಶೆಮಾಯನ ಮಗ, ಓಬದ್ಯನೂ;ಎಲ್ಕಾನನ ಮಗ ಆಸನ ಮಗ ಬೆರೆಕ್ಯನೂ ಇವರು ನೆಟೋಫದವರ ಊರುಗಳಲ್ಲಿ ವಾಸವಾಗಿದ್ದರು. 17 ದ್ವಾರಪಾಲಕರು ಯಾರೆಂದರೆ:ಶಲ್ಲೂಮನೂ, ಅಕ್ಕೂಬನೂ, ಟಲ್ಮೋನನೂ, ಅಹೀಮನ್‌ನೂ, ಅವರ ಸಹೋದರರೂ. ಅವರಲ್ಲಿ ಶಲ್ಲೂಮನು ಮುಖ್ಯಸ್ಥನಾಗಿದ್ದನು. 18 ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. 19 ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು. 20 ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು. 21 ಮೆಷೆಲೆಮ್ಯನ ಮಗನಾದ ಜೆಕರ್ಯನು ದೇವದರ್ಶನ ಗುಡಾರದ ದ್ವಾರಪಾಲಕನಾಗಿದ್ದನು. 22 ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು. 23 ಹೀಗೆಯೇ ಅವರಿಗೂ, ಅವರ ಮಕ್ಕಳಿಗೂ ಯೆಹೋವ ದೇವರ ಮನೆಯ ಬಾಗಿಲು ಕಾವಲಿತ್ತು. ಅದು ದೇವದರ್ಶನ ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರರಿಂದ ಕಾಯಬೇಕಾಗಿತ್ತು. 24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. 25 ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು. 26 ಏಕೆಂದರೆ ದ್ವಾರಪಾಲಕರಲ್ಲಿರುವ ನಾಲ್ಕು ಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯದ ಉಗ್ರಾಣಗಳ ಮೇಲೆಯೂ ಬೊಕ್ಕಸಗಳ ಜವಾಬ್ದಾರಿಯನ್ನು ವಹಿಸಲಾಗಿತ್ತು. 27 ಅವರು ದೇವರ ಆಲಯದ ಸುತ್ತಲೂ ರಾತ್ರಿಯನ್ನು ಕಳೆಯುತ್ತಿದ್ದರು, ಏಕೆಂದರೆ ಅವರು ಅದನ್ನು ಕಾವಲು ಕಾಯಬೇಕಾಗಿತ್ತು. ಮತ್ತು ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುತ್ತಿದ್ದರು. 28 ಸೇವೆಯ ಸಲಕರಣೆಗಳನ್ನು ಒಳಗೆ ಲೆಕ್ಕದ ಪ್ರಕಾರ ತರುವುದಕ್ಕೂ, ಹೊರಗೆ ಲೆಕ್ಕದ ಪ್ರಕಾರ ತರುವುದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು. 29 ಅವರಲ್ಲಿ ಕೆಲವರು ಸಲಕರಣೆಗಳನ್ನೂ, ಪರಿಶುದ್ಧ ಸ್ಥಾನದಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ, ನಯವಾದ ಹಿಟ್ಟನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಸಾಂಬ್ರಾಣಿಯನ್ನೂ, ಸುಗಂಧಗಳನ್ನೂ ಕಾಯಲು ನೇಮಕರಾಗಿದ್ದರು. 30 ಯಾಜಕರ ಪುತ್ರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು. 31 ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು. 32 ಕೊಹಾತ್ಯರ ಪುತ್ರರಾದ ಅವರ ಸಹೋದರರಲ್ಲಿ ಇನ್ನೂ ಕೆಲವರು ಸಮ್ಮುಖದ ರೊಟ್ಟಿಯನ್ನು ಪ್ರತಿ ಸಬ್ಬತ್ ದಿನದಲ್ಲಿ ಸಿದ್ಧಮಾಡುವ ಜವಾಬ್ದಾರಿಯನ್ನು ಹೊಂದಿದ್ದರು. 33 ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು. 34 ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿನಲ್ಲಿ ವಾಸವಾಗಿದ್ದರು. 35 ಇದಲ್ಲದೆ ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು.ಅವನ ಹೆಂಡತಿಯ ಹೆಸರು ಮಾಕಳು. 36 ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು. 37 ಗೆದೋರನು, ಅಹಿಯೋನು, ಜೆಕರೀಯನು, ಮಿಕ್ಲೋತನು. 38 ಮಿಕ್ಲೋತನು ಶಿಮಾಮನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು. 39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು. 40 ಯೋನಾತಾನನ ಮಗನು ಮೆರೀಬ್ಬಾಳನು;ಮೆರೀಬ್ಬಾಳನು ಮೀಕನನ್ನು ಪಡೆದನು. 41 ಮೀಕನ ಪುತ್ರರು:ಪಿತೋನನು, ಮೇಲಕನು, ತಹ್ರೀಯನು ಮತ್ತು ಆಹಾಜನು. 42 ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು; 43 ಮೋಚನು ಬಿನ್ನನನ್ನು ಪಡೆದನು; ಅವನ ಮಗನು ರೆಫಾಯನು; ಅವನ ಮಗನು ಎಲ್ಲಾಸನು; ಅವನ ಮಗನು ಆಚೇಲನು. 44 ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು: ಅವರ ಹೆಸರುಗಳುಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು; ಇವರೆಲ್ಲರು ಆಚೇಲನ ಪುತ್ರರು.
In Other Versions
1 Chronicles 9 in the ANTPNG2D
1 Chronicles 9 in the BNTABOOT
1 Chronicles 9 in the BOHNTLTAL
1 Chronicles 9 in the BOILNTAP
1 Chronicles 9 in the KBT1ETNIK
1 Chronicles 9 in the TBIAOTANT