Ecclesiastes 11 (BOKCV2)
1 ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು.ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು. 2 ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು.ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು. 3 ಮೋಡಗಳು ಮಳೆಯಿಂದ ತುಂಬಿದ್ದರೆ,ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ.ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ,ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು. 4 ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ.ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ. 5 ಗಾಳಿಯ ಚಲನೆಯನ್ನಾಗಲಿಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ,ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವದೇವರ ಕೆಲಸವನ್ನು ನೀನು ಗ್ರಹಿಸಲಾರೆ. 6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು.ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ.ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು.ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ. 7 ಬೆಳಕು ಹಿತಕರ.ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ. 8 ಒಬ್ಬನು ಅನೇಕ ವರ್ಷಗಳು ಬದುಕಿ,ಅವುಗಳಲ್ಲೆಲ್ಲಾ ಸಂತೋಷಪಟ್ಟರೂಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ,ಏಕೆಂದರೆ ಅಂಥ ದಿನಗಳು ಬಹಳ.ಮುಂದಾಗುವುದೆಲ್ಲವೂ ವ್ಯರ್ಥವೇ. 9 ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು.ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ.ನೀನು ನಿನ್ನ ಮನಸ್ಸಿಗೆ ಬಂದಂತೆಯೂನಿನ್ನ ಕಣ್ಣಿನ ನೋಟದಂತೆಯೂ ನಡೆ.ಆದರೆ ಈ ಎಲ್ಲಾ ಸಂಗತಿಗಳಿಗಾಗಿದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ. 10 ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು.ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು.ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.
In Other Versions
Ecclesiastes 11 in the ANTPNG2D
Ecclesiastes 11 in the BNTABOOT
Ecclesiastes 11 in the BOATCB2
Ecclesiastes 11 in the BOGWICC
Ecclesiastes 11 in the BOHNTLTAL
Ecclesiastes 11 in the BOILNTAP
Ecclesiastes 11 in the BOKHWOG
Ecclesiastes 11 in the KBT1ETNIK
Ecclesiastes 11 in the TBIAOTANT