Genesis 21 (BOKCV2)

1 ಯೆಹೋವ ದೇವರು ಸಾರಳಿಗೆ ವಾಗ್ದಾನ ಮಾಡಿದಂತೆ ಆಕೆಗೆ ದಯೆತೋರಿಸಿದರು. 2 ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು. 3 ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ, ಇಸಾಕ, ಎಂದು ಹೆಸರಿಟ್ಟನು. 4 ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. 5 ಅಬ್ರಹಾಮನ ಮಗ ಇಸಾಕನು ಜನಿಸಿದಾಗ ಅವನು ನೂರು ವರ್ಷದವನಾಗಿದ್ದನು. 6 ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು. 7 ಸಾರಳು ಮಕ್ಕಳಿಗೆ ಹಾಲು ಕುಡಿಸುವಳೆಂದು ಅಬ್ರಹಾಮನಿಗೆ ಯಾರು ಹೇಳುತ್ತಿದ್ದರು? ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು,” ಎಂದಳು. 8 ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು. 9 ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ, 10 ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು. 11 ಅಬ್ರಹಾಮನಿಗೆ ತನ್ನ ಮಗನ ದೆಸೆಯಿಂದ ಬಹು ದುಃಖವಾಯಿತು. 12 ಆಗ ದೇವರು ಅಬ್ರಹಾಮನಿಗೆ, “ಹುಡುಗನಿಗಾಗಿಯೂ, ನಿನ್ನ ದಾಸಿಗಾಗಿಯೂ ನೀನು ಚಿಂತಿಸಬೇಡ. ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು. ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು. 13 ದಾಸಿಯ ಮಗನೂ ನಿನ್ನ ಸಂತಾನವಾಗಿರುವುದರಿಂದ, ಅವನನ್ನೂ ನಾನು ಜನಾಂಗವಾಗಿ ಮಾಡುವೆನು,” ಎಂದರು. 14 ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು. 15 ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ, 16 ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು. 17 ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ. 18 ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು. 19 ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು. 20 ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು. 21 ಇಷ್ಮಾಯೇಲನು ಪಾರಾನಿನ ಮರುಭೂಮಿಯಲ್ಲಿ ವಾಸಮಾಡುತ್ತಿದ್ದಾಗ, ಅವನ ತಾಯಿಯು ಅವನಿಗೋಸ್ಕರ ಈಜಿಪ್ಟ್ ದೇಶದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು. 22 ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ. 23 ಆದ್ದರಿಂದ ನೀನು ನನಗೂ, ನನ್ನ ಮಗನಿಗೂ, ನನ್ನ ಮೊಮ್ಮಗನಿಗೂ ವಂಚನೆ ಮಾಡುವುದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣಮಾಡು. ನಾನು ನಿನಗೆ ಒಳ್ಳೆಯದನ್ನೇ ಮಾಡಿದ ಪ್ರಕಾರ, ನೀನು ನನಗೂ, ನೀನು ವಾಸಮಾಡುತ್ತಿರುವ ಈ ದೇಶಕ್ಕೂ ಒಳ್ಳೆಯದನ್ನೇ ಮಾಡಬೇಕು,” ಎಂದನು. 24 ಅದಕ್ಕೆ ಅಬ್ರಹಾಮನು, “ನಾನು ಹಾಗೆಯೇ ಪ್ರಮಾಣ ಮಾಡುತ್ತೇನೆ,” ಎಂದನು. 25 ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು. 26 ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು. 27 ಆಗ ಅಬ್ರಹಾಮನು ಕುರಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು. ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. 28 ಅಬ್ರಹಾಮನು ಹಿಂಡಿನಿಂದ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ಮಾಡಿ ನಿಲ್ಲಿಸಿದನು. 29 ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಆ ಏಳು ಹೆಣ್ಣು ಕುರಿಮರಿಗಳನ್ನು ಬೇರೆಯಾಗಿ ನಿಲ್ಲಿಸಿದ ಅರ್ಥ ಏನು?” ಎಂದನು. 30 ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು. 31 ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅಬ್ರಹಾಮನು ಹೆಸರಿಟ್ಟನು. 32 ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು. 33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು. 34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುಕಾಲ ತಂಗಿದ್ದನು.

In Other Versions

Genesis 21 in the ANGEFD

Genesis 21 in the ANTPNG2D

Genesis 21 in the AS21

Genesis 21 in the BAGH

Genesis 21 in the BBPNG

Genesis 21 in the BBT1E

Genesis 21 in the BDS

Genesis 21 in the BEV

Genesis 21 in the BHAD

Genesis 21 in the BIB

Genesis 21 in the BLPT

Genesis 21 in the BNT

Genesis 21 in the BNTABOOT

Genesis 21 in the BNTLV

Genesis 21 in the BOATCB

Genesis 21 in the BOATCB2

Genesis 21 in the BOBCV

Genesis 21 in the BOCNT

Genesis 21 in the BOECS

Genesis 21 in the BOGWICC

Genesis 21 in the BOHCB

Genesis 21 in the BOHCV

Genesis 21 in the BOHLNT

Genesis 21 in the BOHNTLTAL

Genesis 21 in the BOICB

Genesis 21 in the BOILNTAP

Genesis 21 in the BOITCV

Genesis 21 in the BOKCV

Genesis 21 in the BOKHWOG

Genesis 21 in the BOKSSV

Genesis 21 in the BOLCB

Genesis 21 in the BOLCB2

Genesis 21 in the BOMCV

Genesis 21 in the BONAV

Genesis 21 in the BONCB

Genesis 21 in the BONLT

Genesis 21 in the BONUT2

Genesis 21 in the BOPLNT

Genesis 21 in the BOSCB

Genesis 21 in the BOSNC

Genesis 21 in the BOTLNT

Genesis 21 in the BOVCB

Genesis 21 in the BOYCB

Genesis 21 in the BPBB

Genesis 21 in the BPH

Genesis 21 in the BSB

Genesis 21 in the CCB

Genesis 21 in the CUV

Genesis 21 in the CUVS

Genesis 21 in the DBT

Genesis 21 in the DGDNT

Genesis 21 in the DHNT

Genesis 21 in the DNT

Genesis 21 in the ELBE

Genesis 21 in the EMTV

Genesis 21 in the ESV

Genesis 21 in the FBV

Genesis 21 in the FEB

Genesis 21 in the GGMNT

Genesis 21 in the GNT

Genesis 21 in the HARY

Genesis 21 in the HNT

Genesis 21 in the IRVA

Genesis 21 in the IRVB

Genesis 21 in the IRVG

Genesis 21 in the IRVH

Genesis 21 in the IRVK

Genesis 21 in the IRVM

Genesis 21 in the IRVM2

Genesis 21 in the IRVO

Genesis 21 in the IRVP

Genesis 21 in the IRVT

Genesis 21 in the IRVT2

Genesis 21 in the IRVU

Genesis 21 in the ISVN

Genesis 21 in the JSNT

Genesis 21 in the KAPI

Genesis 21 in the KBT1ETNIK

Genesis 21 in the KBV

Genesis 21 in the KJV

Genesis 21 in the KNFD

Genesis 21 in the LBA

Genesis 21 in the LBLA

Genesis 21 in the LNT

Genesis 21 in the LSV

Genesis 21 in the MAAL

Genesis 21 in the MBV

Genesis 21 in the MBV2

Genesis 21 in the MHNT

Genesis 21 in the MKNFD

Genesis 21 in the MNG

Genesis 21 in the MNT

Genesis 21 in the MNT2

Genesis 21 in the MRS1T

Genesis 21 in the NAA

Genesis 21 in the NASB

Genesis 21 in the NBLA

Genesis 21 in the NBS

Genesis 21 in the NBVTP

Genesis 21 in the NET2

Genesis 21 in the NIV11

Genesis 21 in the NNT

Genesis 21 in the NNT2

Genesis 21 in the NNT3

Genesis 21 in the PDDPT

Genesis 21 in the PFNT

Genesis 21 in the RMNT

Genesis 21 in the SBIAS

Genesis 21 in the SBIBS

Genesis 21 in the SBIBS2

Genesis 21 in the SBICS

Genesis 21 in the SBIDS

Genesis 21 in the SBIGS

Genesis 21 in the SBIHS

Genesis 21 in the SBIIS

Genesis 21 in the SBIIS2

Genesis 21 in the SBIIS3

Genesis 21 in the SBIKS

Genesis 21 in the SBIKS2

Genesis 21 in the SBIMS

Genesis 21 in the SBIOS

Genesis 21 in the SBIPS

Genesis 21 in the SBISS

Genesis 21 in the SBITS

Genesis 21 in the SBITS2

Genesis 21 in the SBITS3

Genesis 21 in the SBITS4

Genesis 21 in the SBIUS

Genesis 21 in the SBIVS

Genesis 21 in the SBT

Genesis 21 in the SBT1E

Genesis 21 in the SCHL

Genesis 21 in the SNT

Genesis 21 in the SUSU

Genesis 21 in the SUSU2

Genesis 21 in the SYNO

Genesis 21 in the TBIAOTANT

Genesis 21 in the TBT1E

Genesis 21 in the TBT1E2

Genesis 21 in the TFTIP

Genesis 21 in the TFTU

Genesis 21 in the TGNTATF3T

Genesis 21 in the THAI

Genesis 21 in the TNFD

Genesis 21 in the TNT

Genesis 21 in the TNTIK

Genesis 21 in the TNTIL

Genesis 21 in the TNTIN

Genesis 21 in the TNTIP

Genesis 21 in the TNTIZ

Genesis 21 in the TOMA

Genesis 21 in the TTENT

Genesis 21 in the UBG

Genesis 21 in the UGV

Genesis 21 in the UGV2

Genesis 21 in the UGV3

Genesis 21 in the VBL

Genesis 21 in the VDCC

Genesis 21 in the YALU

Genesis 21 in the YAPE

Genesis 21 in the YBVTP

Genesis 21 in the ZBP