Genesis 34 (BOKCV2)

1 ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವುದಕ್ಕಾಗಿ ಹೊರಗೆ ಹೋದಳು. 2 ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು. 3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಅವನು ಆ ಹುಡುಗಿಯನ್ನು ಪ್ರೀತಿಸಿ, ಆಕೆಯೊಂದಿಗೆ ಅನುರಾಗದಿಂದ ಮಾತನಾಡಿದನು. 4 ಶೆಕೆಮನು ತನ್ನ ತಂದೆ ಹಮೋರನಿಗೆ, “ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ಹೇಳು,” ಎಂದನು. 5 ಯಾಕೋಬನು ತನ್ನ ಮಗಳಾದ ದೀನಳನ್ನು ಶೆಕೆಮನು ಕೆಡಿಸಿದ್ದಾನೆಂದು ಕೇಳಿದಾಗ, ಅವನ ಮಕ್ಕಳು ಅವನ ಪಶುಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವವರೆಗೆ ಯಾಕೋಬನು ಸುಮ್ಮನಿದ್ದನು. 6 ಆಗ ಶೆಕೆಮನ ತಂದೆ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು. 7 ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು. 8 ಹಮೋರನು ಅವರಿಗೆ, “ನನ್ನ ಮಗ ಶೆಕೆಮನ ಮನಸ್ಸು ನಿಮ್ಮ ಮಗಳನ್ನು ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ, ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. 9 ನೀವು ನಮ್ಮೊಂದಿಗೆ ಮದುವೆ ಸಂಬಂಧ ಮಾಡಿಕೊಳ್ಳಿರಿ. ನಿಮ್ಮ ಪುತ್ರಿಯರನ್ನು ನಮಗೆ ಕೊಡಿರಿ, ನಮ್ಮ ಪುತ್ರಿಯರನ್ನು ನೀವು ಮದುವೆಯಾಗಿರಿ. 10 ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು. 11 ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು. 12 ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು. 13 ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು. 14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿ ಇಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು. ಅದು ನಮಗೆ ಅವಮಾನ. 15 ಆದರೆ ನೀವು ನಮ್ಮ ಹಾಗಿದ್ದು, ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಂಡರೆ ಮಾತ್ರ ನಾವು ನಿಮಗೆ ಒಪ್ಪುವೆವು. 16 ನಮ್ಮ ಪುತ್ರಿಯರನ್ನು ನಿಮಗೆ ಕೊಟ್ಟು, ನಿಮ್ಮ ಪುತ್ರಿಯರನ್ನು ತೆಗೆದುಕೊಳ್ಳುವೆವು. ಇದಲ್ಲದೆ ನಾವು ನಿಮ್ಮೊಂದಿಗೆ ವಾಸಮಾಡಿ, ಒಂದೇ ಜನಾಂಗವಾಗುವೆವು. 17 ಆದರೆ ನೀವು ನಮ್ಮ ಮಾತನ್ನು ಕೇಳದೆ, ಸುನ್ನತಿ ಮಾಡಿಸಿಕೊಳ್ಳದೆ ಹೋದರೆ, ನಮ್ಮ ಹುಡುಗಿಯನ್ನು ನಾವು ಕರೆದುಕೊಂಡು ಹೋಗಿಬಿಡುತ್ತೇವೆ,” ಎಂದು ಹೇಳಿದರು. 18 ಅವರ ಮಾತುಗಳು ಹಮೋರನಿಗೂ, ಅವನ ಮಗ ಶೆಕೆಮನಿಗೂ ಯೋಗ್ಯವಾಗಿ ಕಂಡವು. 19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. 20 ಆಗ ಹಮೋರನೂ, ಅವನ ಮಗ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು, ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ, 21 “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ದೇಶದಲ್ಲಿ ವಾಸಮಾಡಿ, ಅದರಲ್ಲಿ ವ್ಯಾಪಾರಮಾಡಲಿ. ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಪುತ್ರಿಯರನ್ನು ನಮಗೆ ಹೆಂಡತಿಯರನ್ನಾಗಿ ಮಾಡಿಕೊಳ್ಳೋಣ ಮತ್ತು ನಮ್ಮ ಪುತ್ರಿಯರನ್ನು ಅವರಿಗೆ ಕೊಡೋಣ. 22 ಸುನ್ನತಿ ಮಾಡಿಸಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಮಾಡುವುದಕ್ಕೂ, ಒಂದೇ ಜನಾಂಗವಾಗುವುದಕ್ಕೂ ಒಪ್ಪುವರು. 23 ಅವರ ಮಂದೆಗಳೂ, ಅವರ ಸಂಪತ್ತೂ, ಅವರ ಎಲ್ಲಾ ಪಶುಗಳೂ ನಮ್ಮದಾಗುವುವು ಅಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ, ಅವರು ನಮ್ಮ ಸಂಗಡ ವಾಸಿಸುವರು,” ಎಂದರು. 24 ಆಗ ಪಟ್ಟಣದ ದ್ವಾರದಲ್ಲಿ ಹೋಗುವ ಗಂಡಸರೆಲ್ಲರೂ ಹಮೋರನೂ, ಅವನ ಮಗ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ, ಒಪ್ಪಿಕೊಂಡರು. ಹೀಗೆ ಪಟ್ಟಣದಲ್ಲಿದ್ದ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು. 25 ಮೂರನೆಯ ದಿನದಲ್ಲಿ ಅವರಿಗೆ ನೋವುಂಟಾದಾಗ, ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ, ದೀನಳ ಸಹೋದರರಾದ ಸಿಮೆಯೋನನೂ, ಲೇವಿಯೂ ತಮ್ಮ ತಮ್ಮ ಖಡ್ಗಗಳನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು, ಗಂಡಸರನ್ನೆಲ್ಲಾ ಕೊಂದುಹಾಕಿದರು. 26 ಹಮೋರನನ್ನೂ, ಅವನ ಮಗನಾದ ಶೆಕೆಮನನ್ನೂ ಅವರು ಖಡ್ಗದಿಂದ ಕೊಂದುಹಾಕಿ, ದೀನಳನ್ನು ಶೆಕೆಮನ ಮನೆಯಿಂದ ಕರೆದುಕೊಂಡು ಹೊರಗೆ ಹೋದರು. 27 ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು. 28 ಪಟ್ಟಣದಲ್ಲಿಯೂ, ಹೊಲದಲ್ಲಿಯೂ ಇದ್ದ ಅವರ ಕುರಿ, ದನ, ಕತ್ತೆಗಳನ್ನು ತೆಗೆದುಕೊಂಡರು. 29 ಅವರ ಎಲ್ಲಾ ಆಸ್ತಿಯನ್ನೂ, ಅವರ ಎಲ್ಲಾ ಚಿಕ್ಕ ಮಕ್ಕಳನ್ನೂ, ಅವರ ಹೆಂಡತಿಯರನ್ನೂ ಸೆರೆಹಿಡಿದು, ಮನೆಯಲ್ಲಿ ಇದ್ದದ್ದೆಲ್ಲವನ್ನೂ ಅವರು ಕೊಳ್ಳೆಹೊಡೆದರು. 30 ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು. 31 ಆದರೆ ಅವರು, “ಅವನು ನಮ್ಮ ತಂಗಿಯನ್ನು ವೇಶ್ಯೆಯಂತೆ ನಡೆಸಬಹುದೋ?” ಎಂದರು.

In Other Versions

Genesis 34 in the ANGEFD

Genesis 34 in the ANTPNG2D

Genesis 34 in the AS21

Genesis 34 in the BAGH

Genesis 34 in the BBPNG

Genesis 34 in the BBT1E

Genesis 34 in the BDS

Genesis 34 in the BEV

Genesis 34 in the BHAD

Genesis 34 in the BIB

Genesis 34 in the BLPT

Genesis 34 in the BNT

Genesis 34 in the BNTABOOT

Genesis 34 in the BNTLV

Genesis 34 in the BOATCB

Genesis 34 in the BOATCB2

Genesis 34 in the BOBCV

Genesis 34 in the BOCNT

Genesis 34 in the BOECS

Genesis 34 in the BOGWICC

Genesis 34 in the BOHCB

Genesis 34 in the BOHCV

Genesis 34 in the BOHLNT

Genesis 34 in the BOHNTLTAL

Genesis 34 in the BOICB

Genesis 34 in the BOILNTAP

Genesis 34 in the BOITCV

Genesis 34 in the BOKCV

Genesis 34 in the BOKHWOG

Genesis 34 in the BOKSSV

Genesis 34 in the BOLCB

Genesis 34 in the BOLCB2

Genesis 34 in the BOMCV

Genesis 34 in the BONAV

Genesis 34 in the BONCB

Genesis 34 in the BONLT

Genesis 34 in the BONUT2

Genesis 34 in the BOPLNT

Genesis 34 in the BOSCB

Genesis 34 in the BOSNC

Genesis 34 in the BOTLNT

Genesis 34 in the BOVCB

Genesis 34 in the BOYCB

Genesis 34 in the BPBB

Genesis 34 in the BPH

Genesis 34 in the BSB

Genesis 34 in the CCB

Genesis 34 in the CUV

Genesis 34 in the CUVS

Genesis 34 in the DBT

Genesis 34 in the DGDNT

Genesis 34 in the DHNT

Genesis 34 in the DNT

Genesis 34 in the ELBE

Genesis 34 in the EMTV

Genesis 34 in the ESV

Genesis 34 in the FBV

Genesis 34 in the FEB

Genesis 34 in the GGMNT

Genesis 34 in the GNT

Genesis 34 in the HARY

Genesis 34 in the HNT

Genesis 34 in the IRVA

Genesis 34 in the IRVB

Genesis 34 in the IRVG

Genesis 34 in the IRVH

Genesis 34 in the IRVK

Genesis 34 in the IRVM

Genesis 34 in the IRVM2

Genesis 34 in the IRVO

Genesis 34 in the IRVP

Genesis 34 in the IRVT

Genesis 34 in the IRVT2

Genesis 34 in the IRVU

Genesis 34 in the ISVN

Genesis 34 in the JSNT

Genesis 34 in the KAPI

Genesis 34 in the KBT1ETNIK

Genesis 34 in the KBV

Genesis 34 in the KJV

Genesis 34 in the KNFD

Genesis 34 in the LBA

Genesis 34 in the LBLA

Genesis 34 in the LNT

Genesis 34 in the LSV

Genesis 34 in the MAAL

Genesis 34 in the MBV

Genesis 34 in the MBV2

Genesis 34 in the MHNT

Genesis 34 in the MKNFD

Genesis 34 in the MNG

Genesis 34 in the MNT

Genesis 34 in the MNT2

Genesis 34 in the MRS1T

Genesis 34 in the NAA

Genesis 34 in the NASB

Genesis 34 in the NBLA

Genesis 34 in the NBS

Genesis 34 in the NBVTP

Genesis 34 in the NET2

Genesis 34 in the NIV11

Genesis 34 in the NNT

Genesis 34 in the NNT2

Genesis 34 in the NNT3

Genesis 34 in the PDDPT

Genesis 34 in the PFNT

Genesis 34 in the RMNT

Genesis 34 in the SBIAS

Genesis 34 in the SBIBS

Genesis 34 in the SBIBS2

Genesis 34 in the SBICS

Genesis 34 in the SBIDS

Genesis 34 in the SBIGS

Genesis 34 in the SBIHS

Genesis 34 in the SBIIS

Genesis 34 in the SBIIS2

Genesis 34 in the SBIIS3

Genesis 34 in the SBIKS

Genesis 34 in the SBIKS2

Genesis 34 in the SBIMS

Genesis 34 in the SBIOS

Genesis 34 in the SBIPS

Genesis 34 in the SBISS

Genesis 34 in the SBITS

Genesis 34 in the SBITS2

Genesis 34 in the SBITS3

Genesis 34 in the SBITS4

Genesis 34 in the SBIUS

Genesis 34 in the SBIVS

Genesis 34 in the SBT

Genesis 34 in the SBT1E

Genesis 34 in the SCHL

Genesis 34 in the SNT

Genesis 34 in the SUSU

Genesis 34 in the SUSU2

Genesis 34 in the SYNO

Genesis 34 in the TBIAOTANT

Genesis 34 in the TBT1E

Genesis 34 in the TBT1E2

Genesis 34 in the TFTIP

Genesis 34 in the TFTU

Genesis 34 in the TGNTATF3T

Genesis 34 in the THAI

Genesis 34 in the TNFD

Genesis 34 in the TNT

Genesis 34 in the TNTIK

Genesis 34 in the TNTIL

Genesis 34 in the TNTIN

Genesis 34 in the TNTIP

Genesis 34 in the TNTIZ

Genesis 34 in the TOMA

Genesis 34 in the TTENT

Genesis 34 in the UBG

Genesis 34 in the UGV

Genesis 34 in the UGV2

Genesis 34 in the UGV3

Genesis 34 in the VBL

Genesis 34 in the VDCC

Genesis 34 in the YALU

Genesis 34 in the YAPE

Genesis 34 in the YBVTP

Genesis 34 in the ZBP