Isaiah 15 (BOKCV2)
1 ಮೋವಾಬಿನ ವಿಷಯವಾದ ಪ್ರವಾದನೆ:ಆ ರಾತ್ರಿಯಲ್ಲಿ ಮೋವಾಬಿನಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು.ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವುಹಾಳಾಗಿ ನಿಶ್ಶಬ್ದವಾಯಿತು. 2 ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ;ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ.ಪ್ರತಿಯೊಬ್ಬರ ತಲೆಯು ಬೋಳು,ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ. 3 ಅವರು ತಮ್ಮ ಬೀದಿಗಳಲ್ಲಿ ಗೋಣಿತಟ್ಟನ್ನು ತಾವೇ ಸುತ್ತಿಕೊಳ್ಳುವರು.ಪ್ರತಿಯೊಬ್ಬನು ತನ್ನ ಮನೆಯ ಮೇಲೆಯೂ,ಬೀದಿಗಳಲ್ಲಿಯೂ ಅರಚುತ್ತಾಬಹುಶೋಕದಿಂದ ಗೋಳಾಡುವನು. 4 ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ,ಅವರ ಸ್ವರವು ಯಹಚ ಊರಿನವರೆಗೂ ಕೇಳಿಸುತ್ತದೆ.ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು.ಅವರ ಹೃದಯಗಳು ತತ್ತರಿಸುತ್ತವೆ. 5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ.ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು.ಲೂಹೀತ್ ದಿಣ್ಣೆಯನ್ನುಅಳುತ್ತಾ ಹತ್ತುವರು.ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾನಾಶವಾದೆವಲ್ಲಾ ಎಂದು ದನಿಗೈಯುವರು. 6 ನಿಮ್ರೀಮ್ ಹೊಳೆಯು ಬತ್ತಿಹೋಯಿತು,ಹಸಿಹುಲ್ಲು ಬಾಡಿತು,ಮೇವು ತೀರಿತುಅಲ್ಲಿ ಹಸಿರಾದದ್ದು ಇಲ್ಲ. 7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ,ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. 8 ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ.ಅದರ ಕಿರಿಚಾಟ ಎಗ್ಲಯಿಮ್ ಹಾಗೂಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ. 9 ದೀಮೋನ್ ನದಿಯ ನೀರೆಲ್ಲಾ ರಕ್ತವಾಯಿತು.ದೀಮೋನಿನ ಮೇಲೆ ಹೆಚ್ಚಾದ ಹಾನಿಯನ್ನು ತರುವೆನು.ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ,ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.