Jeremiah 34 (BOKCV2)
1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ: 2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು. 3 ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ. 4 “ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ. 5 ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ” 6 ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು. 7 ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು. 8 ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು. 9 ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ. 10 ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು. 11 ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು. 12 ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾಗಿ: 13 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ, 14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ. 15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ. 16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ. 17 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು. 18 ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ, 19 ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ, 20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು. 21 “ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು. 22 ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”
In Other Versions
Jeremiah 34 in the ANGEFD
Jeremiah 34 in the ANTPNG2D
Jeremiah 34 in the AS21
Jeremiah 34 in the BAGH
Jeremiah 34 in the BBPNG
Jeremiah 34 in the BBT1E
Jeremiah 34 in the BDS
Jeremiah 34 in the BEV
Jeremiah 34 in the BHAD
Jeremiah 34 in the BIB
Jeremiah 34 in the BLPT
Jeremiah 34 in the BNT
Jeremiah 34 in the BNTABOOT
Jeremiah 34 in the BNTLV
Jeremiah 34 in the BOATCB
Jeremiah 34 in the BOATCB2
Jeremiah 34 in the BOBCV
Jeremiah 34 in the BOCNT
Jeremiah 34 in the BOECS
Jeremiah 34 in the BOGWICC
Jeremiah 34 in the BOHCB
Jeremiah 34 in the BOHCV
Jeremiah 34 in the BOHLNT
Jeremiah 34 in the BOHNTLTAL
Jeremiah 34 in the BOICB
Jeremiah 34 in the BOILNTAP
Jeremiah 34 in the BOITCV
Jeremiah 34 in the BOKCV
Jeremiah 34 in the BOKHWOG
Jeremiah 34 in the BOKSSV
Jeremiah 34 in the BOLCB
Jeremiah 34 in the BOLCB2
Jeremiah 34 in the BOMCV
Jeremiah 34 in the BONAV
Jeremiah 34 in the BONCB
Jeremiah 34 in the BONLT
Jeremiah 34 in the BONUT2
Jeremiah 34 in the BOPLNT
Jeremiah 34 in the BOSCB
Jeremiah 34 in the BOSNC
Jeremiah 34 in the BOTLNT
Jeremiah 34 in the BOVCB
Jeremiah 34 in the BOYCB
Jeremiah 34 in the BPBB
Jeremiah 34 in the BPH
Jeremiah 34 in the BSB
Jeremiah 34 in the CCB
Jeremiah 34 in the CUV
Jeremiah 34 in the CUVS
Jeremiah 34 in the DBT
Jeremiah 34 in the DGDNT
Jeremiah 34 in the DHNT
Jeremiah 34 in the DNT
Jeremiah 34 in the ELBE
Jeremiah 34 in the EMTV
Jeremiah 34 in the ESV
Jeremiah 34 in the FBV
Jeremiah 34 in the FEB
Jeremiah 34 in the GGMNT
Jeremiah 34 in the GNT
Jeremiah 34 in the HARY
Jeremiah 34 in the HNT
Jeremiah 34 in the IRVA
Jeremiah 34 in the IRVB
Jeremiah 34 in the IRVG
Jeremiah 34 in the IRVH
Jeremiah 34 in the IRVK
Jeremiah 34 in the IRVM
Jeremiah 34 in the IRVM2
Jeremiah 34 in the IRVO
Jeremiah 34 in the IRVP
Jeremiah 34 in the IRVT
Jeremiah 34 in the IRVT2
Jeremiah 34 in the IRVU
Jeremiah 34 in the ISVN
Jeremiah 34 in the JSNT
Jeremiah 34 in the KAPI
Jeremiah 34 in the KBT1ETNIK
Jeremiah 34 in the KBV
Jeremiah 34 in the KJV
Jeremiah 34 in the KNFD
Jeremiah 34 in the LBA
Jeremiah 34 in the LBLA
Jeremiah 34 in the LNT
Jeremiah 34 in the LSV
Jeremiah 34 in the MAAL
Jeremiah 34 in the MBV
Jeremiah 34 in the MBV2
Jeremiah 34 in the MHNT
Jeremiah 34 in the MKNFD
Jeremiah 34 in the MNG
Jeremiah 34 in the MNT
Jeremiah 34 in the MNT2
Jeremiah 34 in the MRS1T
Jeremiah 34 in the NAA
Jeremiah 34 in the NASB
Jeremiah 34 in the NBLA
Jeremiah 34 in the NBS
Jeremiah 34 in the NBVTP
Jeremiah 34 in the NET2
Jeremiah 34 in the NIV11
Jeremiah 34 in the NNT
Jeremiah 34 in the NNT2
Jeremiah 34 in the NNT3
Jeremiah 34 in the PDDPT
Jeremiah 34 in the PFNT
Jeremiah 34 in the RMNT
Jeremiah 34 in the SBIAS
Jeremiah 34 in the SBIBS
Jeremiah 34 in the SBIBS2
Jeremiah 34 in the SBICS
Jeremiah 34 in the SBIDS
Jeremiah 34 in the SBIGS
Jeremiah 34 in the SBIHS
Jeremiah 34 in the SBIIS
Jeremiah 34 in the SBIIS2
Jeremiah 34 in the SBIIS3
Jeremiah 34 in the SBIKS
Jeremiah 34 in the SBIKS2
Jeremiah 34 in the SBIMS
Jeremiah 34 in the SBIOS
Jeremiah 34 in the SBIPS
Jeremiah 34 in the SBISS
Jeremiah 34 in the SBITS
Jeremiah 34 in the SBITS2
Jeremiah 34 in the SBITS3
Jeremiah 34 in the SBITS4
Jeremiah 34 in the SBIUS
Jeremiah 34 in the SBIVS
Jeremiah 34 in the SBT
Jeremiah 34 in the SBT1E
Jeremiah 34 in the SCHL
Jeremiah 34 in the SNT
Jeremiah 34 in the SUSU
Jeremiah 34 in the SUSU2
Jeremiah 34 in the SYNO
Jeremiah 34 in the TBIAOTANT
Jeremiah 34 in the TBT1E
Jeremiah 34 in the TBT1E2
Jeremiah 34 in the TFTIP
Jeremiah 34 in the TFTU
Jeremiah 34 in the TGNTATF3T
Jeremiah 34 in the THAI
Jeremiah 34 in the TNFD
Jeremiah 34 in the TNT
Jeremiah 34 in the TNTIK
Jeremiah 34 in the TNTIL
Jeremiah 34 in the TNTIN
Jeremiah 34 in the TNTIP
Jeremiah 34 in the TNTIZ
Jeremiah 34 in the TOMA
Jeremiah 34 in the TTENT
Jeremiah 34 in the UBG
Jeremiah 34 in the UGV
Jeremiah 34 in the UGV2
Jeremiah 34 in the UGV3
Jeremiah 34 in the VBL
Jeremiah 34 in the VDCC
Jeremiah 34 in the YALU
Jeremiah 34 in the YAPE
Jeremiah 34 in the YBVTP
Jeremiah 34 in the ZBP