Jeremiah 47 (BOKCV2)
1 ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು: 2 ಯೆಹೋವ ದೇವರು ಹೀಗೆ ಹೇಳುತ್ತಾರೆ:“ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ,ಅದು ತುಂಬಿ ತುಳುಕುವ ಪ್ರಳಯವಾಗುವುದು;ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ,ಅದರ ನಿವಾಸಿಗಳನ್ನೂ ಆಕ್ರಮಿಸುವುವು;ಆಗ ಮನುಷ್ಯರು ಕೂಗುವರು;ದೇಶದ ನಿವಾಸಿಗಳೆಲ್ಲರು ಗೋಳಾಡುವರು. 3 ಅವನ ಬಲವಾದ ಕುದುರೆಗಳ ಗೊರಸುಗಳತುಳಿಯುವಿಕೆಯ ಶಬ್ದದಿಂದಲೂಅವನ ರಥಗಳ ಘೋಷದಿಂದಲೂಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು. 4 ಏಕೆಂದರೆ ಫಿಲಿಷ್ಟಿಯರೆಲ್ಲರನ್ನುಸೂರೆ ಮಾಡುವುದಕ್ಕೂ ಟೈರಿನಿಂದಲೂಸೀದೋನಿನಿಂದಲೂ ಉಳಿದವರನ್ನುಕಡಿದುಬಿಡುವುದಕ್ಕೂ ಆ ದಿವಸ ಬಂತು.ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನುಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು. 5 ಗಾಜಾ ಊರು ಬೋಳಿಸಿಕೊಂಡಿದೆ.ಅಷ್ಕೆಲೋನ್ ನಾಶನ ಹೊಂದಿದೆ.ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ? 6 “ಅಯ್ಯೋ, ಯೆಹೋವ ದೇವರ ಖಡ್ಗವೇ,ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ?ನಿನ್ನ ಒರೆಯಲ್ಲಿ ಅಡಗಿಕೋ;ವಿಶ್ರಮಿಸಿಕೋ, ಸುಮ್ಮನಿರು. 7 ಅದು ಹೇಗೆ ಸುಮ್ಮನಿರುವುದು?ಅಷ್ಕೆಲೋನಿಗೆ ವಿರೋಧವಾಗಿ ಮತ್ತುಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ?ಅಲ್ಲಿ ಅದನ್ನು ನೇಮಿಸಿದ್ದಾನೆ.”