Lamentations 3 (BOKCV2)
1 ಯೆಹೋವ ದೇವರ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದಮನುಷ್ಯನು ನಾನೇ. 2 ಅವರು ನನ್ನನ್ನು ಕರೆತಂದು ನಡೆಸಿದ್ದುಕತ್ತಲೆಗೇ ಹೊರತು ಬೆಳಕಿಗಲ್ಲ. 3 ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ.ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ. 4 ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ.ಅವರು ನನ್ನ ಎಲುಬುಗಳನ್ನು ಮುರಿದಿದ್ದಾರೆ. 5 ಅವರು ನನಗೆ ವಿರೋಧವಾಗಿ ಕಟ್ಟಿದ್ದಾರೆ ಮತ್ತು ನನ್ನನ್ನು ವಿಷದಿಂದಲೂ,ಸಂಕಟದಿಂದಲೂ ಸುತ್ತಿಕೊಂಡಿದ್ದಾರೆ. 6 ಅವರು ನನ್ನನ್ನು ಬಹುಕಾಲದ ಹಿಂದೆ ಸತ್ತವರ ಹಾಗೆ,ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾರೆ. 7 ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ.ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ. 8 ನಾನು ಕರೆದು ಕೂಗಿದರೂಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ. 9 ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ,ಆ ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ. 10 ಅವರು ನನಗೆ ಹೊಂಚು ಹಾಕುವ ಕರಡಿಯ ಹಾಗೆಯೂ,ಗುಪ್ತ ಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾರೆ. 11 ಅವರು ನನ್ನ ಮಾರ್ಗಗಳನ್ನು ತಪ್ಪಿಸಿ, ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ,ನನ್ನನ್ನು ಹಾಳು ಮಾಡಿದ್ದಾರೆ. 12 ಅವರು ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ,ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾರೆ. 13 ಅವರು ತನ್ನ ಬತ್ತಳಿಕೆಯಲ್ಲಿನ ಬಾಣಗಳನ್ನುನನ್ನ ಅಂತರಂಗಗಳಲ್ಲಿ ತೂರಿ ಹೋಗುವಹಾಗೆ ಮಾಡಿದ್ದಾರೆ. 14 ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ,ದಿನವೆಲ್ಲವೂ ಅವರ ಗೇಲಿಯ ಹಾಡಾಗಿಯೂ ಇದ್ದೇನೆ. 15 ಅವರು ನನ್ನನ್ನು ಕಹಿಯಿಂದ ತುಂಬಿಸಿ,ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ. 16 ಅವರು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು,ಅವರು ನನ್ನನ್ನು ಧೂಳಿನಲ್ಲಿ ತುಳಿದಿದ್ದಾರೆ. 17 ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ,ನಾನು ಸಮೃದ್ಧಿಯನ್ನು ಮರೆತುಬಿಟ್ಟೆನು. 18 “ಅಯ್ಯೋ, ನನ್ನ ಬಲವು ಮತ್ತುನನ್ನ ನಿರೀಕ್ಷೆಯು ಯೆಹೋವ ದೇವರಿಂದ ನಾಶವಾದವು,”ಎಂದು ನಾನು ಹೇಳಿದೆನು. 19 ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು,ನನ್ನ ಕಹಿಯನ್ನು, ನನ್ನ ವಿಷತನವನ್ನು ನಾನು ಜ್ಞಾಪಕಮಾಡಿಕೊಂಡಿದ್ದೇನೆ. 20 ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿಕೊಳ್ಳುತ್ತಾನನ್ನೊಳಗೆ ಕುಂದಿಹೋಗಿದೆ. 21 ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ.ಆದ್ದರಿಂದ ನನಗೆ ನಿರೀಕ್ಷೆ ಇದೆ. 22 ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ.ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ. 23 ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು.ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು. 24 “ಯೆಹೋವ ದೇವರೇ ನನ್ನ ಪಾಲು,ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,”ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು. 25 ಆತನನ್ನು ನಿರೀಕ್ಷಿಸುವವರಿಗೂ,ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ. 26 ಮನುಷ್ಯನು ಮೌನವಾಗಿಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು. 27 ತನ್ನ ಯೌವನದಲ್ಲಿನೊಗವನ್ನು ಹೊಂದಿರುವುದು ಮಾನವನಿಗೆ ಒಳ್ಳೆಯದು. 28 ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ.ಏಕೆಂದರೆ ಯೆಹೋವ ದೇವರೇ ಅದನ್ನು ಅವನ ಮೇಲೆ ಹೊರಿಸಿದ್ದಾರೆ. 29 ಒಂದು ವೇಳೆ ನಿರೀಕ್ಷೆ ಇರಬಹುದೇನೋ ಎಂದುಅವನು ತನ್ನ ಮುಖವನ್ನು ಧೂಳಿನಲ್ಲಿ ಇಟ್ಟುಕೊಳ್ಳಲಿ. 30 ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ.ಅವನು ನಿಂದೆಯಿಂದಲೇ ತುಂಬಿರಲಿ. 31 ಏಕೆಂದರೆ ಕರ್ತದೇವರುಜನರನ್ನು ಎಂದೆಂದಿಗೂ ತಳ್ಳಿಬಿಡುವುದಿಲ್ಲ. 32 ಆತನು ದುಃಖಪಡಿಸಿದರೂ,ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು. 33 ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ,ದುಃಖವನ್ನೂ ಕೊಡುವುದಿಲ್ಲ. 34 ಭೂಲೋಕದ ಸೆರೆಯವರನ್ನೆಲ್ಲಾಕಾಲುಗಳ ಕೆಳಗೆ ತುಳಿಯುವುದನ್ನೂ, 35 ಮಹೋನ್ನತನ ಸನ್ನಿಧಿಯಲ್ಲಿಮನುಷ್ಯನ ನ್ಯಾಯವನ್ನು ನಿರಾಕರಿಸುವುದನ್ನೂ, 36 ಮನುಷ್ಯನನ್ನು ಅವನ ಜಗಳದಲ್ಲಿಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ. 37 ಕರ್ತದೇವರು ಆಜ್ಞಾಪಿಸದೆ ಇರುವಾಗ,ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು? 38 ಮಹೋನ್ನತರ ಬಾಯಿಂದ ಕೇಡೂ,ಒಳ್ಳೆಯ ಸಂಗತಿಗಳೂ ಹೊರಡುವುದಿಲ್ಲವೇ? 39 ಬದುಕುವ ಮನುಷ್ಯನುತನ್ನ ಪಾಪಗಳ ಶಿಕ್ಷೆಗಾಗಿ ಗೊಣಗುಟ್ಟುವುದೇಕೆ? 40 ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ,ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ. 41 ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ. 42 ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ,ನೀವು ಮನ್ನಿಸಲಿಲ್ಲ. 43 ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ.ಕನಿಕರಿಸದೆ ಕೊಂದು ಹಾಕಿರುವಿರಿ. 44 ನಮ್ಮ ಪ್ರಾರ್ಥನೆಯು ನಿನ್ನ ಸನ್ನಿಧಿಗೆ ಸೇರದಂತೆನಿನ್ನನ್ನು ಮೇಘದಿಂದ ಮುಚ್ಚಿಕೊಂಡಿದ್ದೀರಿ. 45 ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ,ಕಸವನ್ನಾಗಿಯೂ ಮಾಡಿದ್ದೀಯೆ. 46 ನಮ್ಮ ಎಲ್ಲಾ ಶತ್ರುಗಳುನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ. 47 ಭಯವನ್ನೂ, ನಾಶವನ್ನೂನಾವು ಅನುಭವಿಸಿದ್ದೇವೆ. 48 ನನ್ನ ಜನರ ನಾಶದ ನಿಮಿತ್ತವಾಗಿ,ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದು ಹೋಗುತ್ತದೆ. 49 ಯೆಹೋವ ದೇವರು ಕಟಾಕ್ಷಿಸಿ,ಪರಲೋಕದಿಂದ ನೋಡುವ ತನಕನೇತ್ರವು ನಿರಂತರ ಕಣ್ಣೀರು ಸುರಿಸುತ್ತದೆ. 50 ವಿಶ್ರಮಿಸಿಕೊಳ್ಳುವುದೂ ಇಲ್ಲ. 51 ನನ್ನ ನಗರದ ಪುತ್ರಿಯರೆಲ್ಲರ ನಿಮಿತ್ತವಾಗಿನನ್ನ ಕಣ್ಣುಗಳು ನನ್ನ ಹೃದಯವನ್ನು ಪೀಡಿಸಿದೆ. 52 ನನ್ನ ಶತ್ರುಗಳು ಕಾರಣವಿಲ್ಲದೆಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು. 53 ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ,ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. 54 ನನ್ನ ತಲೆಯ ಮೇಲೆ ನೀರು ಹರಿಯಿತು.ಆಗ ನಾನು ನಾಶವಾದೆನು ಅಂದುಕೊಂಡೆನು. 55 ಯೆಹೋವ ದೇವರೇ, ನಾನು ಆಳವಾದ ಕಾರಾಗೃಹದಿಂದನಿಮ್ಮ ಹೆಸರನ್ನು ಎತ್ತಿ ಬೇಡಿಕೊಂಡೆನು. 56 ನೀನು ನನ್ನ ಸ್ವರವನ್ನು ಕೇಳಿದ್ದೀ.“ನನ್ನ ಶ್ವಾಸಕ್ಕೂ, ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಬೇಡಿರಿ.” 57 ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು,“ಭಯಪಡಬೇಡ,” ಎಂದು ಹೇಳಿದಿರಿ. 58 ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ,ನನ್ನ ಜೀವವನ್ನು ವಿಮೋಚಿಸಿದ್ದೀರಿ. 59 ಯೆಹೋವ ದೇವರೇ, ನೀವು ನನ್ನ ಅನ್ಯಾಯವನ್ನು ನೋಡಿದ್ದೀರಿ,ನೀವು ನನ್ನ ನ್ಯಾಯವನ್ನು ತೀರಿಸಿರಿ. 60 ನನಗೆ ವಿರುದ್ಧವಾಗಿಅವರ ಎಲ್ಲಾ ಪ್ರತೀಕಾರವನ್ನೂ ನೋಡಿದ್ದೀರಲ್ಲಾ. 61 ಯೆಹೋವ ದೇವರೇ, ಅವರ ಎಲ್ಲಾ ಕಲ್ಪನೆಗಳನ್ನೂ ಮತ್ತುನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ, 62 ದಿನವಿಡೀ ನನಗೆ ವಿರುದ್ಧವಾದಅವರ ದುರಾಲೋಚನೆಯನ್ನೂ ಕೇಳಿರುವಿರಿ. 63 ಅವರನ್ನು ನೋಡು! ಕುಳಿತು ಅಥವಾ ನಿಂತಾಗ,ಅವರು ತಮ್ಮ ಹಾಡುಗಳಲ್ಲಿ ನನ್ನನ್ನು ಅಣಕಿಸುತ್ತಾರೆ. 64 ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆಪ್ರತಿಫಲವನ್ನು ಕೊಡಿ. 65 ಅವರಿಗೆ ದುಃಖಕರವಾದ ಹೃದಯವನ್ನೂ,ನಿಮ್ಮ ಶಾಪವನ್ನೂ ಕೊಡಿ. 66 ಯೆಹೋವ ದೇವರೇ, ಆಕಾಶದ ಕೆಳಗಿನಿಂದ ಕೋಪದಿಂದಅವರನ್ನು ಹಿಂಸಿಸಿ ಹಾಳುಮಾಡಿರಿ.
In Other Versions
Lamentations 3 in the ANTPNG2D
Lamentations 3 in the BNTABOOT
Lamentations 3 in the BOHNTLTAL
Lamentations 3 in the BOILNTAP
Lamentations 3 in the KBT1ETNIK
Lamentations 3 in the TBIAOTANT