Micah 5 (BOKCV2)
1 ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ.ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ.ಇಸ್ರಾಯೇಲಿನ ಅಧಿಪತಿಯನ್ನುಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ. 2 ಆದರೆ ಎಫ್ರಾತದ ಬೇತ್ಲೆಹೇಮೇ,ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನುನಿನ್ನೊಳಗಿಂದ ನನಗಾಗಿ ಹೊರಡುವನು.ಆತನ ಮೂಲವು ಪೂರ್ವದಿಂದಲೂಅನಾದಿ ಕಾಲದಿಂದಲೂ ಆದದ್ದು. 3 ಆದ್ದರಿಂದ ಹೆರುವವಳು ಒಬ್ಬ ಮಗನನ್ನುಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು.ಆಗ ಅವನ ಸಹೋದರರಲ್ಲಿ ಉಳಿದವರುಇಸ್ರಾಯೇಲರ ಬಳಿಗೆ ಹಿಂದಿರುಗುವರು. 4 ಆತನು ಯೆಹೋವ ದೇವರ ಬಲದಲ್ಲಿಯೂತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು.ಅವರು ನೆಲೆಯಾಗಿರುವರು,ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು. 5 ಆತನೇ ಅವರ ಸಮಾಧಾನವಾಗಿರುವನು.ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು. 6 ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು.ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದುನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗಆತನು ನಮ್ಮನ್ನು ತಪ್ಪಿಸುವನು. 7 ಇದಲ್ಲದೆ ಯಾಕೋಬನ ಶೇಷವುಅನೇಕ ಜನಾಂಗಳ ಮಧ್ಯದಲ್ಲಿಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು.ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ,ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ. 8 ಯಾಕೋಬನ ಜನಶೇಷವು ದೇಶದೇಶಗಳೊಳಗೆಅನೇಕ ಜನಾಂಗಗಳ ಮಧ್ಯದಲ್ಲಿ,ಅಡವಿಯ ಮೃಗಗಳಲ್ಲಿ ಸಿಂಹದಂತೆಯೂಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು.ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ,ಯಾರೂ ಬಿಡಿಸಲಾರರು, 9 ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತವಾಗಿರುವುದು.ನಿನ್ನ ಶತ್ರುಗಳೆಲ್ಲರು ನಾಶಹೊಂದುವರು. 10 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ:“ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟುನಿನ್ನ ರಥಗಳನ್ನು ನಾಶಮಾಡುವೆನು. 11 ನಿನ್ನ ದೇಶದ ಪಟ್ಟಣಗಳನ್ನು ನಾಶಮಾಡಿಬಿಟ್ಟುನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು. 12 ನಿನ್ನ ಮಂತ್ರತಂತ್ರವನ್ನು ನಾಶಮಾಡುವೆನು;ಕಣಿ ಹೇಳುವವರು ನಿನಗೆ ಇನ್ನು ಇರುವುದಿಲ್ಲ. 13 ನಿನ್ನ ಕೆತ್ತಿದ ವಿಗ್ರಹಗಳನ್ನೂನಿಂತಿರುವ ನಿನ್ನ ಪ್ರತಿಮೆಗಳನ್ನೂ ಸಹ ನಿನ್ನ ಮಧ್ಯದೊಳಗಿಂದ ಕಡಿದುಬಿಡುವೆನು.ಇನ್ನು ನಿನ್ನ ಸ್ವಂತ ಕೈಗಳು ರೂಪಿಸಿದ್ದನ್ನುನೀನು ಆರಾಧಿಸದಂತೆ ಮಾಡುವೆನು. 14 ನಿನ್ನ ಅಶೇರ ಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಹಾಕಿನಿನ್ನ ಪಟ್ಟಣಗಳನ್ನು ನಾಶಮಾಡುವೆನು. 15 ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.”