Numbers 28 (BOKCV2)
1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, 2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’ 3 ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು. 4 ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು. 5 ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು. 6 ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. 7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು. 8 ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. 9 “ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. 10 ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ. 11 “ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ, 12 ಒಂದೊಂದು ಹೋರಿಗೆ ಧಾನ್ಯ ಅರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಮೂರು ಭಾಗ ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಹಿಟ್ಟನ್ನೂ, 13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ. 14 ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು. 15 ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು. 16 “ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು. 17 ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. 18 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ. 19 ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು. 20 ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು. 21 ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ ಅರ್ಪಿಸಬೇಕು. 22 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. 23 ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು. 24 ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. 25 ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ. 26 “ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು. 27 ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ, 28 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ ಟಗರಿಗೂ 29 ಏಳು ಕುರಿಮರಿಗಳಲ್ಲಿ ಸುಮಾರು ಒಂದುವರೆ ಕಿಲೋಗ್ರಾಂ, 30 ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಒಂದು ಹೋತವನ್ನು ಸಮರ್ಪಿಸಬೇಕು. 31 ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.
In Other Versions
Numbers 28 in the ANGEFD
Numbers 28 in the ANTPNG2D
Numbers 28 in the AS21
Numbers 28 in the BAGH
Numbers 28 in the BBPNG
Numbers 28 in the BBT1E
Numbers 28 in the BDS
Numbers 28 in the BEV
Numbers 28 in the BHAD
Numbers 28 in the BIB
Numbers 28 in the BLPT
Numbers 28 in the BNT
Numbers 28 in the BNTABOOT
Numbers 28 in the BNTLV
Numbers 28 in the BOATCB
Numbers 28 in the BOATCB2
Numbers 28 in the BOBCV
Numbers 28 in the BOCNT
Numbers 28 in the BOECS
Numbers 28 in the BOGWICC
Numbers 28 in the BOHCB
Numbers 28 in the BOHCV
Numbers 28 in the BOHLNT
Numbers 28 in the BOHNTLTAL
Numbers 28 in the BOICB
Numbers 28 in the BOILNTAP
Numbers 28 in the BOITCV
Numbers 28 in the BOKCV
Numbers 28 in the BOKHWOG
Numbers 28 in the BOKSSV
Numbers 28 in the BOLCB
Numbers 28 in the BOLCB2
Numbers 28 in the BOMCV
Numbers 28 in the BONAV
Numbers 28 in the BONCB
Numbers 28 in the BONLT
Numbers 28 in the BONUT2
Numbers 28 in the BOPLNT
Numbers 28 in the BOSCB
Numbers 28 in the BOSNC
Numbers 28 in the BOTLNT
Numbers 28 in the BOVCB
Numbers 28 in the BOYCB
Numbers 28 in the BPBB
Numbers 28 in the BPH
Numbers 28 in the BSB
Numbers 28 in the CCB
Numbers 28 in the CUV
Numbers 28 in the CUVS
Numbers 28 in the DBT
Numbers 28 in the DGDNT
Numbers 28 in the DHNT
Numbers 28 in the DNT
Numbers 28 in the ELBE
Numbers 28 in the EMTV
Numbers 28 in the ESV
Numbers 28 in the FBV
Numbers 28 in the FEB
Numbers 28 in the GGMNT
Numbers 28 in the GNT
Numbers 28 in the HARY
Numbers 28 in the HNT
Numbers 28 in the IRVA
Numbers 28 in the IRVB
Numbers 28 in the IRVG
Numbers 28 in the IRVH
Numbers 28 in the IRVK
Numbers 28 in the IRVM
Numbers 28 in the IRVM2
Numbers 28 in the IRVO
Numbers 28 in the IRVP
Numbers 28 in the IRVT
Numbers 28 in the IRVT2
Numbers 28 in the IRVU
Numbers 28 in the ISVN
Numbers 28 in the JSNT
Numbers 28 in the KAPI
Numbers 28 in the KBT1ETNIK
Numbers 28 in the KBV
Numbers 28 in the KJV
Numbers 28 in the KNFD
Numbers 28 in the LBA
Numbers 28 in the LBLA
Numbers 28 in the LNT
Numbers 28 in the LSV
Numbers 28 in the MAAL
Numbers 28 in the MBV
Numbers 28 in the MBV2
Numbers 28 in the MHNT
Numbers 28 in the MKNFD
Numbers 28 in the MNG
Numbers 28 in the MNT
Numbers 28 in the MNT2
Numbers 28 in the MRS1T
Numbers 28 in the NAA
Numbers 28 in the NASB
Numbers 28 in the NBLA
Numbers 28 in the NBS
Numbers 28 in the NBVTP
Numbers 28 in the NET2
Numbers 28 in the NIV11
Numbers 28 in the NNT
Numbers 28 in the NNT2
Numbers 28 in the NNT3
Numbers 28 in the PDDPT
Numbers 28 in the PFNT
Numbers 28 in the RMNT
Numbers 28 in the SBIAS
Numbers 28 in the SBIBS
Numbers 28 in the SBIBS2
Numbers 28 in the SBICS
Numbers 28 in the SBIDS
Numbers 28 in the SBIGS
Numbers 28 in the SBIHS
Numbers 28 in the SBIIS
Numbers 28 in the SBIIS2
Numbers 28 in the SBIIS3
Numbers 28 in the SBIKS
Numbers 28 in the SBIKS2
Numbers 28 in the SBIMS
Numbers 28 in the SBIOS
Numbers 28 in the SBIPS
Numbers 28 in the SBISS
Numbers 28 in the SBITS
Numbers 28 in the SBITS2
Numbers 28 in the SBITS3
Numbers 28 in the SBITS4
Numbers 28 in the SBIUS
Numbers 28 in the SBIVS
Numbers 28 in the SBT
Numbers 28 in the SBT1E
Numbers 28 in the SCHL
Numbers 28 in the SNT
Numbers 28 in the SUSU
Numbers 28 in the SUSU2
Numbers 28 in the SYNO
Numbers 28 in the TBIAOTANT
Numbers 28 in the TBT1E
Numbers 28 in the TBT1E2
Numbers 28 in the TFTIP
Numbers 28 in the TFTU
Numbers 28 in the TGNTATF3T
Numbers 28 in the THAI
Numbers 28 in the TNFD
Numbers 28 in the TNT
Numbers 28 in the TNTIK
Numbers 28 in the TNTIL
Numbers 28 in the TNTIN
Numbers 28 in the TNTIP
Numbers 28 in the TNTIZ
Numbers 28 in the TOMA
Numbers 28 in the TTENT
Numbers 28 in the UBG
Numbers 28 in the UGV
Numbers 28 in the UGV2
Numbers 28 in the UGV3
Numbers 28 in the VBL
Numbers 28 in the VDCC
Numbers 28 in the YALU
Numbers 28 in the YAPE
Numbers 28 in the YBVTP
Numbers 28 in the ZBP