Proverbs 13 (BOKCV2)
1 ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ;ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ. 2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ,ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ. 3 ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ;ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು. 4 ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ;ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು. 5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ,ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ. 6 ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ;ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ. 7 ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ;ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ. 8 ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ;ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. 9 ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ;ದುಷ್ಟರ ದೀಪವು ಆರಿಹೋಗುವುದು. 10 ಎಲ್ಲಿ ಗರ್ವವೋ ಅಲ್ಲಿ ಕಲಹ;ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ. 11 ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು;ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು. 12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ;ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು. 13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು;ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. 14 ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ. 15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ;ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ. 16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ;ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ. 17 ದುಷ್ಟ ದೂತನು ಕೇಡಿಗೆ ಬೀಳುತ್ತಾನೆ;ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು. 18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು;ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು. 19 ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ;ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ. 20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು;ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು. 21 ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ;ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು. 22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು;ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ. 23 ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ;ಅನ್ಯಾಯವು ಅದನ್ನು ಹಾರಿಸಿಬಿಡುವುದು. 24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ;ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ. 25 ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ;ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.