Psalms 100 (BOKCV2)
undefined ಕೀರ್ತನೆ. ಕೃತಜ್ಞತೆಯ ಗೀತೆ. 1 ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ. 2 ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ;ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ. 3 ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ;ಅವರೇ ನಮ್ಮನ್ನು ಉಂಟುಮಾಡಿದ್ದಾರೆ;ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ. 4 ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ,ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ;ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ. 5 ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು.ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.