Psalms 101 (BOKCV2)
undefined ದಾವೀದನ ಕೀರ್ತನೆ. 1 ನಿಮ್ಮ ಪ್ರೀತಿ ನೀತಿಗಳನ್ನು ಕುರಿತು ಹಾಡುವೆನು;ಯೆಹೋವ ದೇವರೇ, ನಿಮ್ಮನ್ನು ಸ್ತುತಿಸುವೆನು. 2 ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು;ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದನನ್ನ ಮನೆಯೊಳಗೆ ನಡೆದುಕೊಳ್ಳುವೆನು. 3 ನಾನು ಕೆಟ್ಟ ಕಾರ್ಯವನ್ನುನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು;ಅದರಲ್ಲಿ ನಾನು ಭಾಗವಹಿಸುವುದಿಲ್ಲ. 4 ಮೂರ್ಖಜನರು ನನ್ನಿಂದ ದೂರವಿರುವರು;ದುಷ್ಟತನವನ್ನು ಅರಿಯದಿರುವೆನು. 5 ಮರೆಯಾಗಿ ನೆರೆಯವನ ಮೇಲೆಚಾಡಿ ಹೇಳುವವನನ್ನು ಸುಮ್ಮನಿರಿಸುವೆನು;ಗರ್ವದ ಕಣ್ಣೂ, ಅಹಂಕಾರದ ಹೃದಯವೂಉಳ್ಳವನನ್ನು ಸಹಿಸಲಾರೆನು. 6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು;ನಿಷ್ಕಳಂಕವಾಗಿ ನಡೆಯುವವರೇನನ್ನ ಸೇವೆಯಲ್ಲಿರಬೇಕು. 7 ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು;ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು. 8 ದುಷ್ಟತನ ಮಾಡುವವರೆಲ್ಲರನ್ನುಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು;ಯೆಹೋವ ದೇವರ ಪಟ್ಟಣದೊಳಗಿಂದಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.