Psalms 12 (BOKCV2)
undefined ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಶೆಮಿನಿಥ್ ಸ್ವರದೊಂದಿಗೆ ಹಾಡತಕ್ಕದ್ದು. ದಾವೀದನ ಕೀರ್ತನೆ. 1 ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ;ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ. 2 ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ;ಅವರು ತಮ್ಮ ತುಟಿಯಿಂದ ಹೊಗಳಿ,ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ. 3 ಹೊಗಳಿಕೆಯ ಎಲ್ಲಾ ತುಟಿಗಳನ್ನೂಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ. 4 ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು;ನಮ್ಮ ತುಟಿಗಳೇ ನಮಗೆ ಸಂರಕ್ಷಣೆನಮ್ಮ ಮೇಲೆ ಒಡೆಯನು ಯಾರು?” 5 “ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರುನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.“ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.” 6 ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು.ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ. 7 ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನುದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ, 8 ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ,ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.