Psalms 123 (BOKCV2)
undefined ಯಾತ್ರಾ ಗೀತೆ. 1 ಪರಲೋಕದಲ್ಲಿ ಸಿಂಹಾಸನರಾಗಿರುವವರೇ,ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ. 2 ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ,ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ,ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು,ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು. 3 ನಮ್ಮನ್ನು ಕರುಣಿಸು, ಯೆಹೋವ ದೇವರೇ, ನಮ್ಮನ್ನು ಕರುಣಿಸು;ಏಕೆಂದರೆ ನಾವು ಬಹಳವಾಗಿ ತಿರಸ್ಕಾರವನ್ನು ಅನುಭವಿಸಿದ್ದೇವೆ. 4 ನಾವು ಸುಖಭೋಗಿಗಳ ಗೇಲಿಯನ್ನೂಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ.