Psalms 130 (BOKCV2)
undefined ಯಾತ್ರಾ ಗೀತೆ. 1 ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ. 2 ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ.ನನ್ನ ಕೂಗಿಗೆ ಕರುಣೆ ತೋರಿಸಿ,ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ. 3 ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ,ನಿಮ್ಮ ಮುಂದೆ ಯಾರು ನಿಲ್ಲುವರು? 4 ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು.ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ. 5 ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ;ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. 6 ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ.ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ. 7 ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ,ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ,ಸಂಪೂರ್ಣ ವಿಮೋಚನೆಯೂ ಇರುತ್ತದೆ. 8 ದೇವರು ಇಸ್ರಾಯೇಲನ್ನು ಅವರಎಲ್ಲಾ ಅಕ್ರಮಗಳಿಂದ ವಿಮೋಚಿಸುವರು.