Psalms 24 (BOKCV2)
undefined ದಾವೀದನ ಕೀರ್ತನೆ. 1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ;ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು. 2 ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ. 3 ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು?ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು? 4 ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು;ವಂಚನೆಯಿಂದ ಮುಕ್ತನಾಗಿ,ಮೋಸದಿಂದ ಆಣೆ ಇಡದೆಯೂ ಇರುವವನೇ. 5 ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು.ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು. 6 ಇಂಥವರೇ ದೇವರನ್ನು ಹುಡುಕುವ ಸಂತತಿಯು;ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ. 7 ದ್ವಾರಗಳೇ ತಲೆ ಎತ್ತಿ ನೋಡಿರಿ,ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ;ಮಹಿಮೆಯ ಅರಸ ಒಳಗೆ ಬರಲಿದ್ದಾರೆ. 8 ಈ ಮಹಿಮೆಯ ಅರಸ ಯಾರು?ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ.ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ. 9 ದ್ವಾರಗಳೇ, ತಲೆ ಎತ್ತಿ ನೋಡಿರಿ,ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ;ಮಹಿಮೆಯ ಅರಸ ಒಳಗೆ ಬರಲಿದ್ದಾರೆ. 10 ಮಹಿಮೆಯ ಅರಸ ಯಾರು?ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ.ಇವರೇ ಮಹಿಮೆಯ ಅರಸರು.