Psalms 28 (BOKCV2)
undefined ದಾವೀದನ ಕೀರ್ತನೆ. 1 ಯೆಹೋವ ದೇವರೇ,ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ.ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ,ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು. 2 ನಾನು ನಿಮಗೆ ಮೊರೆಯಿಡುವಾಗ,ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧಸ್ಥಳದ ಕಡೆಗೆ ಎತ್ತುವಾಗನನ್ನ ವಿಜ್ಞಾಪನೆಯನ್ನು ಲಾಲಿಸಿರಿ. 3 ದುಷ್ಟರ ಸಂಗಡವೂ ಅಪರಾಧ ಮಾಡುವವರಸಂಗಡವೂ ನನ್ನನ್ನು ಎಳೆಯಬೇಡಿರಿ;ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ;ಆದರೆ ಕೇಡು ಅವರ ಹೃದಯದಲ್ಲಿ ಇದೆ. 4 ಅವರ ಕೃತ್ಯಗಳ ಪ್ರಕಾರವಾಗಿಯೂ,ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ;ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ,ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ. 5 ಅವರು ಯೆಹೋವ ದೇವರ ಕೃತ್ಯಗಳನ್ನೂ,ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ;ಆದ್ದರಿಂದ ದೇವರು ಅವರನ್ನುವೃದ್ಧಿಗೊಳಿಸದೆ ದಂಡಿಸುವರು. 6 ಯೆಹೋವ ದೇವರಿಗೆ ಸ್ತುತಿಯುಂಟಾಗಲಿ;ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ. 7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ;ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು;ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು;ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು. 8 ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ;ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ. 9 ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ;ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.