Psalms 3 (BOKCV2)
undefined ದಾವೀದನ ಕೀರ್ತನೆ. ಅವನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ್ದು. 1 ಯೆಹೋವ ದೇವರೇ, ನನ್ನ ವೈರಿಗಳು ಬಹುಜನ!ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ! 2 “ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದುಅನೇಕರು ನನ್ನ ಬಗ್ಗೆ ಹೇಳುತ್ತಾರೆ. 3 ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ,ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ. 4 ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು,ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು. 5 ನಾನು ಮಲಗಿ ನಿದ್ರಿಸುವೆನು;ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು. 6 ಸಾವಿರಾರು ಜನರು ನನಗೆ ವಿರೋಧವಾಗಿನನ್ನ ಸುತ್ತುವರಿದರೂ ನಾನು ಭಯಪಡೆನು. 7 ಯೆಹೋವ ದೇವರೇ, ಏಳಿರಿ!ನನ್ನ ದೇವರೇ, ನನ್ನನ್ನು ರಕ್ಷಿಸಿರಿ.ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ;ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ. 8 ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು.ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.