Psalms 4 (BOKCV2)
undefined ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕದ್ದು. ದಾವೀದನ ಕೀರ್ತನೆ. 1 ನನ್ನ ನೀತಿಯಾಗಿರುವ ದೇವರೇ,ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ.ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ;ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ. 2 ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ?ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ? 3 ಯೆಹೋವ ದೇವರು ತಮ್ಮ ನಂಬಿಗಸ್ತರನ್ನುತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ;ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು. 4 ನಡುಗಿರಿ, ಪಾಪಮಾಡಬೇಡಿರಿ;ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ,ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ. 5 ನೀತಿಯ ಬಲಿಗಳನ್ನು ಅರ್ಪಿಸಿರಿಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ. 6 ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?”ಎಂದು ಕೇಳುವವರು ಅನೇಕರಿದ್ದಾರೆ.ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ. 7 ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ. 8 ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು,ಏಕೆಂದರೆ ಯೆಹೋವ ದೇವರೇ,ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.