Psalms 48 (BOKCV2)
undefined ಒಂದು ಗೀತೆ. ಕೋರಹೀಯನ ಪುತ್ರರು ಸಂಯೋಜಿಸಿರುವ ಒಂದು ಕೀರ್ತನೆ. 1 ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ. 2 ಉತ್ತರ ದಿಕ್ಕಿನಲ್ಲಿರುವಮಹಾರಾಜರ ಪಟ್ಟಣವಾದಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ. 3 ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ.ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ. 4 ಏಕೆಂದರೆ, ಇಗೋ, ಅರಸರು ಕೂಡಿಬಂದರು.ಅವರು ಒಟ್ಟಾಗಿ ದಾಳಿಮಾಡಲು ಬಂದರು. 5 ಅವರು ಪಟ್ಟಣವನ್ನು ಕಂಡು, ಬೆರಗಾದರು.ಅವರು ಭಯಪಟ್ಟು ಓಡಿಹೋದರು. 6 ಅಲ್ಲಿ ನಡುಕವವೂ ಹೆರುವವಳ ಹಾಗೆನೋವೂ ಅವರನ್ನು ಹಿಡಿಯಿತು. 7 ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ. 8 ನಾವು ಹೇಗೆ ಕೇಳಿದೆವೋಹಾಗೆಯೇ ಕಣ್ಣಾರೆ ಕಂಡೆವು,ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ,ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು:ದೇವರು ಪಟ್ಟಣವನ್ನುಎಂದೆಂದಿಗೂ ಸ್ಥಿರಪಡಿಸುವರು. 9 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನುನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ. 10 ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ;ನಿಮ್ಮ ಬಲಗೈ ನೀತಿಯಿಂದ ತುಂಬಿದೆ. 11 ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತಚೀಯೋನ್ ಪರ್ವತವು ಸಂತೋಷಪಡಲಿ;ಯೆಹೂದ ಪುತ್ರಿಯರು ಉಲ್ಲಾಸಪಡಲಿ. 12 ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿಅದರ ಗೋಪುರಗಳನ್ನು ಎಣಿಸಿರಿ. 13 ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರಅದರ ಗೋಪುರಗಳನ್ನುಕಣ್ಣಿಟ್ಟು ನೋಡಿರಿ,ಅದರ ಅರಮನೆಗಳನ್ನು ಲಕ್ಷಿಸಿರಿ. 14 ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ;ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.