Psalms 53 (BOKCV2)
undefined ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು. ಮಸ್ಕೀಲ್ ರಾಗದಲ್ಲಿ ರಚಿಸಿದ ದಾವೀದನ ಕೀರ್ತನೆ. 1 “ದೇವರು ಇಲ್ಲಾ,” ಎಂದುಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ.ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ.ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ. 2 ದೇವರನ್ನು ಹುಡುಕುವಜ್ಞಾನಿಗಳು ಇದ್ದಾರೋಎಂದು ನೋಡುವುದಕ್ಕೆದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು. 3 ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ,ಒಬ್ಬರಾದರೂ ಇಲ್ಲ.ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು. 4 ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ?ಅವರು ದೇವರನ್ನು ಸ್ಮರಿಸುವುದೇ ಇಲ್ಲ. 5 ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು;ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನುದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ.ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ. 6 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು!ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.