Psalms 63 (BOKCV2)
undefined ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. 1 ದೇವರೇ, ನನ್ನ ದೇವರು ನೀವೇ,ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ.ನಾನು ನಿಮಗಾಗಿ ದಾಹಗೊಂಡಿದ್ದೇನೆ.ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ.ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ. 2 ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ.ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ. 3 ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು.ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು. 4 ನಾನು ಜೀವಿಸುವ ಕಾಲವೆಲ್ಲಾ ನಿಮ್ಮನ್ನೇ ಸ್ತುತಿಸುವೆನು.ನಿಮ್ಮ ಹೆಸರಿನಲ್ಲಿ ನಾನು ನನ್ನ ಕೈ ಮುಗಿಯುವೆನು. 5 ಮೃಷ್ಟ ಭೋಜನದಿಂದಲೋ ಎಂಬಂತೆ ನಾನು ನಿಮ್ಮಲ್ಲಿ ಸಂತೃಪ್ತನಾಗಿದ್ದೇನೆ.ಉತ್ಸಾಹದ ತುಟಿಗಳಿಂದ ನನ್ನ ಬಾಯಿಯು ನಿಮ್ಮನ್ನು ಸ್ತುತಿಸುವುದು. 6 ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು. 7 ಏಕೆಂದರೆ ನೀವೇ ನನಗೆ ಸಹಾಯಕರಾಗಿದ್ದೀರಿ.ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಹಾಡುತ್ತಿರುವೆನು. 8 ನನ್ನ ಪ್ರಾಣವು ನಿಮ್ಮನ್ನು ಆತುಕೊಂಡಿದೆ.ನಿಮ್ಮ ಬಲಗೈ ನನಗೆ ಬೆಂಬಲವಾಗಿದೆ. 9 ನನ್ನ ಪ್ರಾಣಕ್ಕೆ ಕೇಡು ಬಯಸುವವರು ತಾವೇ ನಾಶವಾಗುವರುಅವರು ಭೂಮಿಯ ಆಳಕ್ಕೆ ಹೋಗುವರು. 10 ಖಡ್ಗದಿಂದ ಅವರು ಬೀಳುವರು.ನರಿಗಳಿಗೆ ಆಹಾರವಾಗುವರು. 11 ಆದರೆ ಅರಸನು ದೇವರಲ್ಲಿ ಸಂತೋಷಿಸುವನು.ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು.ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು.