Psalms 70 (BOKCV2)
undefined ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಬೇಡಿಕೆ. 1 ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ;ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ. 2 ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರುನಾಚಿಕೆಪಟ್ಟು ಗಲಿಬಿಲಿಯಾಗಲಿ.ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂಹಿಂಜರಿದು ಅವಮಾನ ಹೊಂದಲಿ. 3 “ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರುತಮ್ಮ ನಾಚಿಕೆಯ ಫಲಕ್ಕಾಗಿ ಬೆಂಗೊಟ್ಟು ಓಡಲಿ. 4 ಆದರೆ, ನಿಮ್ಮನ್ನು ಹುಡುಕುವವರೆಲ್ಲರೂನಿಮ್ಮಲ್ಲಿ ಹರ್ಷಾನಂದಗೊಳ್ಳಲಿ.ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು,“ದೇವರು ಮಹೋನ್ನತರು,”ಎಂದು ಯಾವಾಗಲೂ ಹೇಳಲಿ. 5 ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ.ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ.ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ,ಯೆಹೋವ ದೇವರೇ, ತಡಮಾಡದೆ ಬನ್ನಿರಿ.