Psalms 75 (BOKCV2)
undefined ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಅಲ್ತಷ್ಟೇತೆಂಬ ರಾಗ. ಆಸಾಫನ ಕೀರ್ತನೆ. ಒಂದು ಗೀತೆ. 1 ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ,ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ,ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ. 2 “ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು.ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು, 3 ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ.ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ. 4 ‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ.‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು. 5 ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ.ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ. 6 ಏಕೆಂದರೆ ಉದ್ಧಾರವು ಪೂರ್ವದಿಂದಲೂಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ. 7 ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ.ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ. 8 ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ.ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ.ಅದನ್ನು ಅವರು ಹೊಯ್ಯುತ್ತಾರೆ.ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು. 9 ನಾನಾದರೋ ಸದಾ ವರ್ಣಿಸುವವನಾಗಿಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು. 10 ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು.ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.