Psalms 82 (BOKCV2)
undefined ಆಸಾಫನ ಕೀರ್ತನೆ. 1 ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ,ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ. 2 “ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ.ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ? 3 ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ.ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ. 4 ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ.ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ. 5 “ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ.ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ.ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ. 6 “ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು,ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು. 7 ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ.ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.” 8 ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ.ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ.