1 Samuel 10 (IRVK)

1 ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. 2 ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು. 3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು. 4 ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು. 5 ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು. 6 ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ. 7 ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ. 8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು. 9 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು. 10 ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು. 11 ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು. 12 ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು. 13 ಅವನು ಪ್ರವಾದಿಸಿದ ನಂತರ ಬೆಟ್ಟದ ಮೇಲಿದ್ದ ಯಜ್ಞವೇದಿಯ ಬಳಿಗೆ ಬಂದನು. 14 ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು. 15 “ಸಮುವೇಲನು ಏನು ಹೇಳಿದನು?” ಎಂದು ಚಿಕ್ಕಪ್ಪನು ಕೇಳಲು 16 ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ. 17 ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು. 18 ಆತನು ಅವರಿಗೆ, ಇಸ್ರಾಯೇಲ್‌ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ. 19 ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು. 20 ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು. 21 ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ. 22 ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು. 23 ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು. 24 ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು. 25 ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು. 26 ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು. 27 ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

In Other Versions

1 Samuel 10 in the ANGEFD

1 Samuel 10 in the ANTPNG2D

1 Samuel 10 in the AS21

1 Samuel 10 in the BAGH

1 Samuel 10 in the BBPNG

1 Samuel 10 in the BBT1E

1 Samuel 10 in the BDS

1 Samuel 10 in the BEV

1 Samuel 10 in the BHAD

1 Samuel 10 in the BIB

1 Samuel 10 in the BLPT

1 Samuel 10 in the BNT

1 Samuel 10 in the BNTABOOT

1 Samuel 10 in the BNTLV

1 Samuel 10 in the BOATCB

1 Samuel 10 in the BOATCB2

1 Samuel 10 in the BOBCV

1 Samuel 10 in the BOCNT

1 Samuel 10 in the BOECS

1 Samuel 10 in the BOGWICC

1 Samuel 10 in the BOHCB

1 Samuel 10 in the BOHCV

1 Samuel 10 in the BOHLNT

1 Samuel 10 in the BOHNTLTAL

1 Samuel 10 in the BOICB

1 Samuel 10 in the BOILNTAP

1 Samuel 10 in the BOITCV

1 Samuel 10 in the BOKCV

1 Samuel 10 in the BOKCV2

1 Samuel 10 in the BOKHWOG

1 Samuel 10 in the BOKSSV

1 Samuel 10 in the BOLCB

1 Samuel 10 in the BOLCB2

1 Samuel 10 in the BOMCV

1 Samuel 10 in the BONAV

1 Samuel 10 in the BONCB

1 Samuel 10 in the BONLT

1 Samuel 10 in the BONUT2

1 Samuel 10 in the BOPLNT

1 Samuel 10 in the BOSCB

1 Samuel 10 in the BOSNC

1 Samuel 10 in the BOTLNT

1 Samuel 10 in the BOVCB

1 Samuel 10 in the BOYCB

1 Samuel 10 in the BPBB

1 Samuel 10 in the BPH

1 Samuel 10 in the BSB

1 Samuel 10 in the CCB

1 Samuel 10 in the CUV

1 Samuel 10 in the CUVS

1 Samuel 10 in the DBT

1 Samuel 10 in the DGDNT

1 Samuel 10 in the DHNT

1 Samuel 10 in the DNT

1 Samuel 10 in the ELBE

1 Samuel 10 in the EMTV

1 Samuel 10 in the ESV

1 Samuel 10 in the FBV

1 Samuel 10 in the FEB

1 Samuel 10 in the GGMNT

1 Samuel 10 in the GNT

1 Samuel 10 in the HARY

1 Samuel 10 in the HNT

1 Samuel 10 in the IRVA

1 Samuel 10 in the IRVB

1 Samuel 10 in the IRVG

1 Samuel 10 in the IRVH

1 Samuel 10 in the IRVM

1 Samuel 10 in the IRVM2

1 Samuel 10 in the IRVO

1 Samuel 10 in the IRVP

1 Samuel 10 in the IRVT

1 Samuel 10 in the IRVT2

1 Samuel 10 in the IRVU

1 Samuel 10 in the ISVN

1 Samuel 10 in the JSNT

1 Samuel 10 in the KAPI

1 Samuel 10 in the KBT1ETNIK

1 Samuel 10 in the KBV

1 Samuel 10 in the KJV

1 Samuel 10 in the KNFD

1 Samuel 10 in the LBA

1 Samuel 10 in the LBLA

1 Samuel 10 in the LNT

1 Samuel 10 in the LSV

1 Samuel 10 in the MAAL

1 Samuel 10 in the MBV

1 Samuel 10 in the MBV2

1 Samuel 10 in the MHNT

1 Samuel 10 in the MKNFD

1 Samuel 10 in the MNG

1 Samuel 10 in the MNT

1 Samuel 10 in the MNT2

1 Samuel 10 in the MRS1T

1 Samuel 10 in the NAA

1 Samuel 10 in the NASB

1 Samuel 10 in the NBLA

1 Samuel 10 in the NBS

1 Samuel 10 in the NBVTP

1 Samuel 10 in the NET2

1 Samuel 10 in the NIV11

1 Samuel 10 in the NNT

1 Samuel 10 in the NNT2

1 Samuel 10 in the NNT3

1 Samuel 10 in the PDDPT

1 Samuel 10 in the PFNT

1 Samuel 10 in the RMNT

1 Samuel 10 in the SBIAS

1 Samuel 10 in the SBIBS

1 Samuel 10 in the SBIBS2

1 Samuel 10 in the SBICS

1 Samuel 10 in the SBIDS

1 Samuel 10 in the SBIGS

1 Samuel 10 in the SBIHS

1 Samuel 10 in the SBIIS

1 Samuel 10 in the SBIIS2

1 Samuel 10 in the SBIIS3

1 Samuel 10 in the SBIKS

1 Samuel 10 in the SBIKS2

1 Samuel 10 in the SBIMS

1 Samuel 10 in the SBIOS

1 Samuel 10 in the SBIPS

1 Samuel 10 in the SBISS

1 Samuel 10 in the SBITS

1 Samuel 10 in the SBITS2

1 Samuel 10 in the SBITS3

1 Samuel 10 in the SBITS4

1 Samuel 10 in the SBIUS

1 Samuel 10 in the SBIVS

1 Samuel 10 in the SBT

1 Samuel 10 in the SBT1E

1 Samuel 10 in the SCHL

1 Samuel 10 in the SNT

1 Samuel 10 in the SUSU

1 Samuel 10 in the SUSU2

1 Samuel 10 in the SYNO

1 Samuel 10 in the TBIAOTANT

1 Samuel 10 in the TBT1E

1 Samuel 10 in the TBT1E2

1 Samuel 10 in the TFTIP

1 Samuel 10 in the TFTU

1 Samuel 10 in the TGNTATF3T

1 Samuel 10 in the THAI

1 Samuel 10 in the TNFD

1 Samuel 10 in the TNT

1 Samuel 10 in the TNTIK

1 Samuel 10 in the TNTIL

1 Samuel 10 in the TNTIN

1 Samuel 10 in the TNTIP

1 Samuel 10 in the TNTIZ

1 Samuel 10 in the TOMA

1 Samuel 10 in the TTENT

1 Samuel 10 in the UBG

1 Samuel 10 in the UGV

1 Samuel 10 in the UGV2

1 Samuel 10 in the UGV3

1 Samuel 10 in the VBL

1 Samuel 10 in the VDCC

1 Samuel 10 in the YALU

1 Samuel 10 in the YAPE

1 Samuel 10 in the YBVTP

1 Samuel 10 in the ZBP