2 Chronicles 30 (IRVK)

1 ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು. 2 ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು. 3 ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು. 4 ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ 5 ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ. 6 ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು. 7 ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. 8 ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು. 9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.” 10 ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. 11 ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. 12 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು. 13 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು. 14 ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. 15 ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು. 16 ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. 17 ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. 18 ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು. 19 ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು. 20 ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು. 21 ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು. 22 ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು. 23 ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು 24 ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು. 25 ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು. 26 ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು. 27 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.

In Other Versions

2 Chronicles 30 in the ANGEFD

2 Chronicles 30 in the ANTPNG2D

2 Chronicles 30 in the AS21

2 Chronicles 30 in the BAGH

2 Chronicles 30 in the BBPNG

2 Chronicles 30 in the BBT1E

2 Chronicles 30 in the BDS

2 Chronicles 30 in the BEV

2 Chronicles 30 in the BHAD

2 Chronicles 30 in the BIB

2 Chronicles 30 in the BLPT

2 Chronicles 30 in the BNT

2 Chronicles 30 in the BNTABOOT

2 Chronicles 30 in the BNTLV

2 Chronicles 30 in the BOATCB

2 Chronicles 30 in the BOATCB2

2 Chronicles 30 in the BOBCV

2 Chronicles 30 in the BOCNT

2 Chronicles 30 in the BOECS

2 Chronicles 30 in the BOGWICC

2 Chronicles 30 in the BOHCB

2 Chronicles 30 in the BOHCV

2 Chronicles 30 in the BOHLNT

2 Chronicles 30 in the BOHNTLTAL

2 Chronicles 30 in the BOICB

2 Chronicles 30 in the BOILNTAP

2 Chronicles 30 in the BOITCV

2 Chronicles 30 in the BOKCV

2 Chronicles 30 in the BOKCV2

2 Chronicles 30 in the BOKHWOG

2 Chronicles 30 in the BOKSSV

2 Chronicles 30 in the BOLCB

2 Chronicles 30 in the BOLCB2

2 Chronicles 30 in the BOMCV

2 Chronicles 30 in the BONAV

2 Chronicles 30 in the BONCB

2 Chronicles 30 in the BONLT

2 Chronicles 30 in the BONUT2

2 Chronicles 30 in the BOPLNT

2 Chronicles 30 in the BOSCB

2 Chronicles 30 in the BOSNC

2 Chronicles 30 in the BOTLNT

2 Chronicles 30 in the BOVCB

2 Chronicles 30 in the BOYCB

2 Chronicles 30 in the BPBB

2 Chronicles 30 in the BPH

2 Chronicles 30 in the BSB

2 Chronicles 30 in the CCB

2 Chronicles 30 in the CUV

2 Chronicles 30 in the CUVS

2 Chronicles 30 in the DBT

2 Chronicles 30 in the DGDNT

2 Chronicles 30 in the DHNT

2 Chronicles 30 in the DNT

2 Chronicles 30 in the ELBE

2 Chronicles 30 in the EMTV

2 Chronicles 30 in the ESV

2 Chronicles 30 in the FBV

2 Chronicles 30 in the FEB

2 Chronicles 30 in the GGMNT

2 Chronicles 30 in the GNT

2 Chronicles 30 in the HARY

2 Chronicles 30 in the HNT

2 Chronicles 30 in the IRVA

2 Chronicles 30 in the IRVB

2 Chronicles 30 in the IRVG

2 Chronicles 30 in the IRVH

2 Chronicles 30 in the IRVM

2 Chronicles 30 in the IRVM2

2 Chronicles 30 in the IRVO

2 Chronicles 30 in the IRVP

2 Chronicles 30 in the IRVT

2 Chronicles 30 in the IRVT2

2 Chronicles 30 in the IRVU

2 Chronicles 30 in the ISVN

2 Chronicles 30 in the JSNT

2 Chronicles 30 in the KAPI

2 Chronicles 30 in the KBT1ETNIK

2 Chronicles 30 in the KBV

2 Chronicles 30 in the KJV

2 Chronicles 30 in the KNFD

2 Chronicles 30 in the LBA

2 Chronicles 30 in the LBLA

2 Chronicles 30 in the LNT

2 Chronicles 30 in the LSV

2 Chronicles 30 in the MAAL

2 Chronicles 30 in the MBV

2 Chronicles 30 in the MBV2

2 Chronicles 30 in the MHNT

2 Chronicles 30 in the MKNFD

2 Chronicles 30 in the MNG

2 Chronicles 30 in the MNT

2 Chronicles 30 in the MNT2

2 Chronicles 30 in the MRS1T

2 Chronicles 30 in the NAA

2 Chronicles 30 in the NASB

2 Chronicles 30 in the NBLA

2 Chronicles 30 in the NBS

2 Chronicles 30 in the NBVTP

2 Chronicles 30 in the NET2

2 Chronicles 30 in the NIV11

2 Chronicles 30 in the NNT

2 Chronicles 30 in the NNT2

2 Chronicles 30 in the NNT3

2 Chronicles 30 in the PDDPT

2 Chronicles 30 in the PFNT

2 Chronicles 30 in the RMNT

2 Chronicles 30 in the SBIAS

2 Chronicles 30 in the SBIBS

2 Chronicles 30 in the SBIBS2

2 Chronicles 30 in the SBICS

2 Chronicles 30 in the SBIDS

2 Chronicles 30 in the SBIGS

2 Chronicles 30 in the SBIHS

2 Chronicles 30 in the SBIIS

2 Chronicles 30 in the SBIIS2

2 Chronicles 30 in the SBIIS3

2 Chronicles 30 in the SBIKS

2 Chronicles 30 in the SBIKS2

2 Chronicles 30 in the SBIMS

2 Chronicles 30 in the SBIOS

2 Chronicles 30 in the SBIPS

2 Chronicles 30 in the SBISS

2 Chronicles 30 in the SBITS

2 Chronicles 30 in the SBITS2

2 Chronicles 30 in the SBITS3

2 Chronicles 30 in the SBITS4

2 Chronicles 30 in the SBIUS

2 Chronicles 30 in the SBIVS

2 Chronicles 30 in the SBT

2 Chronicles 30 in the SBT1E

2 Chronicles 30 in the SCHL

2 Chronicles 30 in the SNT

2 Chronicles 30 in the SUSU

2 Chronicles 30 in the SUSU2

2 Chronicles 30 in the SYNO

2 Chronicles 30 in the TBIAOTANT

2 Chronicles 30 in the TBT1E

2 Chronicles 30 in the TBT1E2

2 Chronicles 30 in the TFTIP

2 Chronicles 30 in the TFTU

2 Chronicles 30 in the TGNTATF3T

2 Chronicles 30 in the THAI

2 Chronicles 30 in the TNFD

2 Chronicles 30 in the TNT

2 Chronicles 30 in the TNTIK

2 Chronicles 30 in the TNTIL

2 Chronicles 30 in the TNTIN

2 Chronicles 30 in the TNTIP

2 Chronicles 30 in the TNTIZ

2 Chronicles 30 in the TOMA

2 Chronicles 30 in the TTENT

2 Chronicles 30 in the UBG

2 Chronicles 30 in the UGV

2 Chronicles 30 in the UGV2

2 Chronicles 30 in the UGV3

2 Chronicles 30 in the VBL

2 Chronicles 30 in the VDCC

2 Chronicles 30 in the YALU

2 Chronicles 30 in the YAPE

2 Chronicles 30 in the YBVTP

2 Chronicles 30 in the ZBP