Exodus 13 (IRVK)
1 ಯೆಹೋವನು ಮೋಶೆಯ ಸಂಗಡ ಮಾತನಾಡಿ, 2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು. 3 ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು. 4 ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ. 5 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು. 6 ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು. 7 ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು. 8 ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ. 9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು. 10 ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು. 11 “ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ, 12 ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು. 13 ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು. 14 ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು. 15 ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು. 16 ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು. 17 ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು. 18 ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು. 19 ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು. 20 ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು. 21 ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು. 22 ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.
In Other Versions
Exodus 13 in the ANGEFD
Exodus 13 in the ANTPNG2D
Exodus 13 in the AS21
Exodus 13 in the BAGH
Exodus 13 in the BBPNG
Exodus 13 in the BBT1E
Exodus 13 in the BDS
Exodus 13 in the BEV
Exodus 13 in the BHAD
Exodus 13 in the BIB
Exodus 13 in the BLPT
Exodus 13 in the BNT
Exodus 13 in the BNTABOOT
Exodus 13 in the BNTLV
Exodus 13 in the BOATCB
Exodus 13 in the BOATCB2
Exodus 13 in the BOBCV
Exodus 13 in the BOCNT
Exodus 13 in the BOECS
Exodus 13 in the BOGWICC
Exodus 13 in the BOHCB
Exodus 13 in the BOHCV
Exodus 13 in the BOHLNT
Exodus 13 in the BOHNTLTAL
Exodus 13 in the BOICB
Exodus 13 in the BOILNTAP
Exodus 13 in the BOITCV
Exodus 13 in the BOKCV
Exodus 13 in the BOKCV2
Exodus 13 in the BOKHWOG
Exodus 13 in the BOKSSV
Exodus 13 in the BOLCB
Exodus 13 in the BOLCB2
Exodus 13 in the BOMCV
Exodus 13 in the BONAV
Exodus 13 in the BONCB
Exodus 13 in the BONLT
Exodus 13 in the BONUT2
Exodus 13 in the BOPLNT
Exodus 13 in the BOSCB
Exodus 13 in the BOSNC
Exodus 13 in the BOTLNT
Exodus 13 in the BOVCB
Exodus 13 in the BOYCB
Exodus 13 in the BPBB
Exodus 13 in the BPH
Exodus 13 in the BSB
Exodus 13 in the CCB
Exodus 13 in the CUV
Exodus 13 in the CUVS
Exodus 13 in the DBT
Exodus 13 in the DGDNT
Exodus 13 in the DHNT
Exodus 13 in the DNT
Exodus 13 in the ELBE
Exodus 13 in the EMTV
Exodus 13 in the ESV
Exodus 13 in the FBV
Exodus 13 in the FEB
Exodus 13 in the GGMNT
Exodus 13 in the GNT
Exodus 13 in the HARY
Exodus 13 in the HNT
Exodus 13 in the IRVA
Exodus 13 in the IRVB
Exodus 13 in the IRVG
Exodus 13 in the IRVH
Exodus 13 in the IRVM
Exodus 13 in the IRVM2
Exodus 13 in the IRVO
Exodus 13 in the IRVP
Exodus 13 in the IRVT
Exodus 13 in the IRVT2
Exodus 13 in the IRVU
Exodus 13 in the ISVN
Exodus 13 in the JSNT
Exodus 13 in the KAPI
Exodus 13 in the KBT1ETNIK
Exodus 13 in the KBV
Exodus 13 in the KJV
Exodus 13 in the KNFD
Exodus 13 in the LBA
Exodus 13 in the LBLA
Exodus 13 in the LNT
Exodus 13 in the LSV
Exodus 13 in the MAAL
Exodus 13 in the MBV
Exodus 13 in the MBV2
Exodus 13 in the MHNT
Exodus 13 in the MKNFD
Exodus 13 in the MNG
Exodus 13 in the MNT
Exodus 13 in the MNT2
Exodus 13 in the MRS1T
Exodus 13 in the NAA
Exodus 13 in the NASB
Exodus 13 in the NBLA
Exodus 13 in the NBS
Exodus 13 in the NBVTP
Exodus 13 in the NET2
Exodus 13 in the NIV11
Exodus 13 in the NNT
Exodus 13 in the NNT2
Exodus 13 in the NNT3
Exodus 13 in the PDDPT
Exodus 13 in the PFNT
Exodus 13 in the RMNT
Exodus 13 in the SBIAS
Exodus 13 in the SBIBS
Exodus 13 in the SBIBS2
Exodus 13 in the SBICS
Exodus 13 in the SBIDS
Exodus 13 in the SBIGS
Exodus 13 in the SBIHS
Exodus 13 in the SBIIS
Exodus 13 in the SBIIS2
Exodus 13 in the SBIIS3
Exodus 13 in the SBIKS
Exodus 13 in the SBIKS2
Exodus 13 in the SBIMS
Exodus 13 in the SBIOS
Exodus 13 in the SBIPS
Exodus 13 in the SBISS
Exodus 13 in the SBITS
Exodus 13 in the SBITS2
Exodus 13 in the SBITS3
Exodus 13 in the SBITS4
Exodus 13 in the SBIUS
Exodus 13 in the SBIVS
Exodus 13 in the SBT
Exodus 13 in the SBT1E
Exodus 13 in the SCHL
Exodus 13 in the SNT
Exodus 13 in the SUSU
Exodus 13 in the SUSU2
Exodus 13 in the SYNO
Exodus 13 in the TBIAOTANT
Exodus 13 in the TBT1E
Exodus 13 in the TBT1E2
Exodus 13 in the TFTIP
Exodus 13 in the TFTU
Exodus 13 in the TGNTATF3T
Exodus 13 in the THAI
Exodus 13 in the TNFD
Exodus 13 in the TNT
Exodus 13 in the TNTIK
Exodus 13 in the TNTIL
Exodus 13 in the TNTIN
Exodus 13 in the TNTIP
Exodus 13 in the TNTIZ
Exodus 13 in the TOMA
Exodus 13 in the TTENT
Exodus 13 in the UBG
Exodus 13 in the UGV
Exodus 13 in the UGV2
Exodus 13 in the UGV3
Exodus 13 in the VBL
Exodus 13 in the VDCC
Exodus 13 in the YALU
Exodus 13 in the YAPE
Exodus 13 in the YBVTP
Exodus 13 in the ZBP