Ezekiel 1 (IRVK)

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು. 2 ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ, 3 ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು. 4 ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು. 5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು. 6 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು. 7 ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು. 8 ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ, 9 ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು. 10 ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು. 11 ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು. 12 ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು. 13 ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು. 14 ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು. 15 ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು. 16 ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು. 17 ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ. 18 ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು; 19 ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು; 20 ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. 21 ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು. 22 ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು. 23 ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು. 24 ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. 25 ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. 26 ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು. 27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. 28 ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.

In Other Versions

Ezekiel 1 in the ANGEFD

Ezekiel 1 in the ANTPNG2D

Ezekiel 1 in the AS21

Ezekiel 1 in the BAGH

Ezekiel 1 in the BBPNG

Ezekiel 1 in the BBT1E

Ezekiel 1 in the BDS

Ezekiel 1 in the BEV

Ezekiel 1 in the BHAD

Ezekiel 1 in the BIB

Ezekiel 1 in the BLPT

Ezekiel 1 in the BNT

Ezekiel 1 in the BNTABOOT

Ezekiel 1 in the BNTLV

Ezekiel 1 in the BOATCB

Ezekiel 1 in the BOATCB2

Ezekiel 1 in the BOBCV

Ezekiel 1 in the BOCNT

Ezekiel 1 in the BOECS

Ezekiel 1 in the BOGWICC

Ezekiel 1 in the BOHCB

Ezekiel 1 in the BOHCV

Ezekiel 1 in the BOHLNT

Ezekiel 1 in the BOHNTLTAL

Ezekiel 1 in the BOICB

Ezekiel 1 in the BOILNTAP

Ezekiel 1 in the BOITCV

Ezekiel 1 in the BOKCV

Ezekiel 1 in the BOKCV2

Ezekiel 1 in the BOKHWOG

Ezekiel 1 in the BOKSSV

Ezekiel 1 in the BOLCB

Ezekiel 1 in the BOLCB2

Ezekiel 1 in the BOMCV

Ezekiel 1 in the BONAV

Ezekiel 1 in the BONCB

Ezekiel 1 in the BONLT

Ezekiel 1 in the BONUT2

Ezekiel 1 in the BOPLNT

Ezekiel 1 in the BOSCB

Ezekiel 1 in the BOSNC

Ezekiel 1 in the BOTLNT

Ezekiel 1 in the BOVCB

Ezekiel 1 in the BOYCB

Ezekiel 1 in the BPBB

Ezekiel 1 in the BPH

Ezekiel 1 in the BSB

Ezekiel 1 in the CCB

Ezekiel 1 in the CUV

Ezekiel 1 in the CUVS

Ezekiel 1 in the DBT

Ezekiel 1 in the DGDNT

Ezekiel 1 in the DHNT

Ezekiel 1 in the DNT

Ezekiel 1 in the ELBE

Ezekiel 1 in the EMTV

Ezekiel 1 in the ESV

Ezekiel 1 in the FBV

Ezekiel 1 in the FEB

Ezekiel 1 in the GGMNT

Ezekiel 1 in the GNT

Ezekiel 1 in the HARY

Ezekiel 1 in the HNT

Ezekiel 1 in the IRVA

Ezekiel 1 in the IRVB

Ezekiel 1 in the IRVG

Ezekiel 1 in the IRVH

Ezekiel 1 in the IRVM

Ezekiel 1 in the IRVM2

Ezekiel 1 in the IRVO

Ezekiel 1 in the IRVP

Ezekiel 1 in the IRVT

Ezekiel 1 in the IRVT2

Ezekiel 1 in the IRVU

Ezekiel 1 in the ISVN

Ezekiel 1 in the JSNT

Ezekiel 1 in the KAPI

Ezekiel 1 in the KBT1ETNIK

Ezekiel 1 in the KBV

Ezekiel 1 in the KJV

Ezekiel 1 in the KNFD

Ezekiel 1 in the LBA

Ezekiel 1 in the LBLA

Ezekiel 1 in the LNT

Ezekiel 1 in the LSV

Ezekiel 1 in the MAAL

Ezekiel 1 in the MBV

Ezekiel 1 in the MBV2

Ezekiel 1 in the MHNT

Ezekiel 1 in the MKNFD

Ezekiel 1 in the MNG

Ezekiel 1 in the MNT

Ezekiel 1 in the MNT2

Ezekiel 1 in the MRS1T

Ezekiel 1 in the NAA

Ezekiel 1 in the NASB

Ezekiel 1 in the NBLA

Ezekiel 1 in the NBS

Ezekiel 1 in the NBVTP

Ezekiel 1 in the NET2

Ezekiel 1 in the NIV11

Ezekiel 1 in the NNT

Ezekiel 1 in the NNT2

Ezekiel 1 in the NNT3

Ezekiel 1 in the PDDPT

Ezekiel 1 in the PFNT

Ezekiel 1 in the RMNT

Ezekiel 1 in the SBIAS

Ezekiel 1 in the SBIBS

Ezekiel 1 in the SBIBS2

Ezekiel 1 in the SBICS

Ezekiel 1 in the SBIDS

Ezekiel 1 in the SBIGS

Ezekiel 1 in the SBIHS

Ezekiel 1 in the SBIIS

Ezekiel 1 in the SBIIS2

Ezekiel 1 in the SBIIS3

Ezekiel 1 in the SBIKS

Ezekiel 1 in the SBIKS2

Ezekiel 1 in the SBIMS

Ezekiel 1 in the SBIOS

Ezekiel 1 in the SBIPS

Ezekiel 1 in the SBISS

Ezekiel 1 in the SBITS

Ezekiel 1 in the SBITS2

Ezekiel 1 in the SBITS3

Ezekiel 1 in the SBITS4

Ezekiel 1 in the SBIUS

Ezekiel 1 in the SBIVS

Ezekiel 1 in the SBT

Ezekiel 1 in the SBT1E

Ezekiel 1 in the SCHL

Ezekiel 1 in the SNT

Ezekiel 1 in the SUSU

Ezekiel 1 in the SUSU2

Ezekiel 1 in the SYNO

Ezekiel 1 in the TBIAOTANT

Ezekiel 1 in the TBT1E

Ezekiel 1 in the TBT1E2

Ezekiel 1 in the TFTIP

Ezekiel 1 in the TFTU

Ezekiel 1 in the TGNTATF3T

Ezekiel 1 in the THAI

Ezekiel 1 in the TNFD

Ezekiel 1 in the TNT

Ezekiel 1 in the TNTIK

Ezekiel 1 in the TNTIL

Ezekiel 1 in the TNTIN

Ezekiel 1 in the TNTIP

Ezekiel 1 in the TNTIZ

Ezekiel 1 in the TOMA

Ezekiel 1 in the TTENT

Ezekiel 1 in the UBG

Ezekiel 1 in the UGV

Ezekiel 1 in the UGV2

Ezekiel 1 in the UGV3

Ezekiel 1 in the VBL

Ezekiel 1 in the VDCC

Ezekiel 1 in the YALU

Ezekiel 1 in the YAPE

Ezekiel 1 in the YBVTP

Ezekiel 1 in the ZBP