Ezekiel 36 (IRVK)

1 “ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ. 2 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು. 3 ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ. 4 ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ, 5 ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’ 6 ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’ 7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ. 8 ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ. 9 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ. 10 ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. 11 ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು. 12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’” 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ. 14 “ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ. 15 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. 16 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 17 “ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು. 18 ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು. 19 ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು. 20 ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು. 21 ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.” 22 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ. 23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ. 24 “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು. 25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು. 26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. 27 ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ. 28 ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು. 29 ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ. 30 ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು. 31 ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.” 32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.” 33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. 34 ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು. 35 ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು. 36 ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.” 37 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. 38 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.”

In Other Versions

Ezekiel 36 in the ANGEFD

Ezekiel 36 in the ANTPNG2D

Ezekiel 36 in the AS21

Ezekiel 36 in the BAGH

Ezekiel 36 in the BBPNG

Ezekiel 36 in the BBT1E

Ezekiel 36 in the BDS

Ezekiel 36 in the BEV

Ezekiel 36 in the BHAD

Ezekiel 36 in the BIB

Ezekiel 36 in the BLPT

Ezekiel 36 in the BNT

Ezekiel 36 in the BNTABOOT

Ezekiel 36 in the BNTLV

Ezekiel 36 in the BOATCB

Ezekiel 36 in the BOATCB2

Ezekiel 36 in the BOBCV

Ezekiel 36 in the BOCNT

Ezekiel 36 in the BOECS

Ezekiel 36 in the BOGWICC

Ezekiel 36 in the BOHCB

Ezekiel 36 in the BOHCV

Ezekiel 36 in the BOHLNT

Ezekiel 36 in the BOHNTLTAL

Ezekiel 36 in the BOICB

Ezekiel 36 in the BOILNTAP

Ezekiel 36 in the BOITCV

Ezekiel 36 in the BOKCV

Ezekiel 36 in the BOKCV2

Ezekiel 36 in the BOKHWOG

Ezekiel 36 in the BOKSSV

Ezekiel 36 in the BOLCB

Ezekiel 36 in the BOLCB2

Ezekiel 36 in the BOMCV

Ezekiel 36 in the BONAV

Ezekiel 36 in the BONCB

Ezekiel 36 in the BONLT

Ezekiel 36 in the BONUT2

Ezekiel 36 in the BOPLNT

Ezekiel 36 in the BOSCB

Ezekiel 36 in the BOSNC

Ezekiel 36 in the BOTLNT

Ezekiel 36 in the BOVCB

Ezekiel 36 in the BOYCB

Ezekiel 36 in the BPBB

Ezekiel 36 in the BPH

Ezekiel 36 in the BSB

Ezekiel 36 in the CCB

Ezekiel 36 in the CUV

Ezekiel 36 in the CUVS

Ezekiel 36 in the DBT

Ezekiel 36 in the DGDNT

Ezekiel 36 in the DHNT

Ezekiel 36 in the DNT

Ezekiel 36 in the ELBE

Ezekiel 36 in the EMTV

Ezekiel 36 in the ESV

Ezekiel 36 in the FBV

Ezekiel 36 in the FEB

Ezekiel 36 in the GGMNT

Ezekiel 36 in the GNT

Ezekiel 36 in the HARY

Ezekiel 36 in the HNT

Ezekiel 36 in the IRVA

Ezekiel 36 in the IRVB

Ezekiel 36 in the IRVG

Ezekiel 36 in the IRVH

Ezekiel 36 in the IRVM

Ezekiel 36 in the IRVM2

Ezekiel 36 in the IRVO

Ezekiel 36 in the IRVP

Ezekiel 36 in the IRVT

Ezekiel 36 in the IRVT2

Ezekiel 36 in the IRVU

Ezekiel 36 in the ISVN

Ezekiel 36 in the JSNT

Ezekiel 36 in the KAPI

Ezekiel 36 in the KBT1ETNIK

Ezekiel 36 in the KBV

Ezekiel 36 in the KJV

Ezekiel 36 in the KNFD

Ezekiel 36 in the LBA

Ezekiel 36 in the LBLA

Ezekiel 36 in the LNT

Ezekiel 36 in the LSV

Ezekiel 36 in the MAAL

Ezekiel 36 in the MBV

Ezekiel 36 in the MBV2

Ezekiel 36 in the MHNT

Ezekiel 36 in the MKNFD

Ezekiel 36 in the MNG

Ezekiel 36 in the MNT

Ezekiel 36 in the MNT2

Ezekiel 36 in the MRS1T

Ezekiel 36 in the NAA

Ezekiel 36 in the NASB

Ezekiel 36 in the NBLA

Ezekiel 36 in the NBS

Ezekiel 36 in the NBVTP

Ezekiel 36 in the NET2

Ezekiel 36 in the NIV11

Ezekiel 36 in the NNT

Ezekiel 36 in the NNT2

Ezekiel 36 in the NNT3

Ezekiel 36 in the PDDPT

Ezekiel 36 in the PFNT

Ezekiel 36 in the RMNT

Ezekiel 36 in the SBIAS

Ezekiel 36 in the SBIBS

Ezekiel 36 in the SBIBS2

Ezekiel 36 in the SBICS

Ezekiel 36 in the SBIDS

Ezekiel 36 in the SBIGS

Ezekiel 36 in the SBIHS

Ezekiel 36 in the SBIIS

Ezekiel 36 in the SBIIS2

Ezekiel 36 in the SBIIS3

Ezekiel 36 in the SBIKS

Ezekiel 36 in the SBIKS2

Ezekiel 36 in the SBIMS

Ezekiel 36 in the SBIOS

Ezekiel 36 in the SBIPS

Ezekiel 36 in the SBISS

Ezekiel 36 in the SBITS

Ezekiel 36 in the SBITS2

Ezekiel 36 in the SBITS3

Ezekiel 36 in the SBITS4

Ezekiel 36 in the SBIUS

Ezekiel 36 in the SBIVS

Ezekiel 36 in the SBT

Ezekiel 36 in the SBT1E

Ezekiel 36 in the SCHL

Ezekiel 36 in the SNT

Ezekiel 36 in the SUSU

Ezekiel 36 in the SUSU2

Ezekiel 36 in the SYNO

Ezekiel 36 in the TBIAOTANT

Ezekiel 36 in the TBT1E

Ezekiel 36 in the TBT1E2

Ezekiel 36 in the TFTIP

Ezekiel 36 in the TFTU

Ezekiel 36 in the TGNTATF3T

Ezekiel 36 in the THAI

Ezekiel 36 in the TNFD

Ezekiel 36 in the TNT

Ezekiel 36 in the TNTIK

Ezekiel 36 in the TNTIL

Ezekiel 36 in the TNTIN

Ezekiel 36 in the TNTIP

Ezekiel 36 in the TNTIZ

Ezekiel 36 in the TOMA

Ezekiel 36 in the TTENT

Ezekiel 36 in the UBG

Ezekiel 36 in the UGV

Ezekiel 36 in the UGV2

Ezekiel 36 in the UGV3

Ezekiel 36 in the VBL

Ezekiel 36 in the VDCC

Ezekiel 36 in the YALU

Ezekiel 36 in the YAPE

Ezekiel 36 in the YBVTP

Ezekiel 36 in the ZBP