Genesis 21 (IRVK)
1 ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು. 2 ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು. 3 ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ “ಇಸಾಕ” ಎಂದು ಹೆಸರಿಟ್ಟನು. 4 ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು. 5 ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು. 6 ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು. 7 ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. 8 ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. 9 ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು, 10 ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು. 11 ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. 12 ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು; 13 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು. 14 ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. 15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ, 16 ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು. 17 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು; 18 ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. 19 ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು. 20 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು. 21 ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು. 22 ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ. 23 ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. 24 ಅದಕ್ಕೆ ಅಬ್ರಹಾಮನು “ಹಾಗೆಯೇ” ಪ್ರಮಾಣಮಾಡುತ್ತೇನೆ ಅಂದನು. 25 ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು, 26 ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು. 27 ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು. 28 ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು, 29 ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. 30 ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು. 31 ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು. 32 ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು. 33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು. 34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.
In Other Versions
Genesis 21 in the ANGEFD
Genesis 21 in the ANTPNG2D
Genesis 21 in the AS21
Genesis 21 in the BAGH
Genesis 21 in the BBPNG
Genesis 21 in the BBT1E
Genesis 21 in the BDS
Genesis 21 in the BEV
Genesis 21 in the BHAD
Genesis 21 in the BIB
Genesis 21 in the BLPT
Genesis 21 in the BNT
Genesis 21 in the BNTABOOT
Genesis 21 in the BNTLV
Genesis 21 in the BOATCB
Genesis 21 in the BOATCB2
Genesis 21 in the BOBCV
Genesis 21 in the BOCNT
Genesis 21 in the BOECS
Genesis 21 in the BOGWICC
Genesis 21 in the BOHCB
Genesis 21 in the BOHCV
Genesis 21 in the BOHLNT
Genesis 21 in the BOHNTLTAL
Genesis 21 in the BOICB
Genesis 21 in the BOILNTAP
Genesis 21 in the BOITCV
Genesis 21 in the BOKCV
Genesis 21 in the BOKCV2
Genesis 21 in the BOKHWOG
Genesis 21 in the BOKSSV
Genesis 21 in the BOLCB
Genesis 21 in the BOLCB2
Genesis 21 in the BOMCV
Genesis 21 in the BONAV
Genesis 21 in the BONCB
Genesis 21 in the BONLT
Genesis 21 in the BONUT2
Genesis 21 in the BOPLNT
Genesis 21 in the BOSCB
Genesis 21 in the BOSNC
Genesis 21 in the BOTLNT
Genesis 21 in the BOVCB
Genesis 21 in the BOYCB
Genesis 21 in the BPBB
Genesis 21 in the BPH
Genesis 21 in the BSB
Genesis 21 in the CCB
Genesis 21 in the CUV
Genesis 21 in the CUVS
Genesis 21 in the DBT
Genesis 21 in the DGDNT
Genesis 21 in the DHNT
Genesis 21 in the DNT
Genesis 21 in the ELBE
Genesis 21 in the EMTV
Genesis 21 in the ESV
Genesis 21 in the FBV
Genesis 21 in the FEB
Genesis 21 in the GGMNT
Genesis 21 in the GNT
Genesis 21 in the HARY
Genesis 21 in the HNT
Genesis 21 in the IRVA
Genesis 21 in the IRVB
Genesis 21 in the IRVG
Genesis 21 in the IRVH
Genesis 21 in the IRVM
Genesis 21 in the IRVM2
Genesis 21 in the IRVO
Genesis 21 in the IRVP
Genesis 21 in the IRVT
Genesis 21 in the IRVT2
Genesis 21 in the IRVU
Genesis 21 in the ISVN
Genesis 21 in the JSNT
Genesis 21 in the KAPI
Genesis 21 in the KBT1ETNIK
Genesis 21 in the KBV
Genesis 21 in the KJV
Genesis 21 in the KNFD
Genesis 21 in the LBA
Genesis 21 in the LBLA
Genesis 21 in the LNT
Genesis 21 in the LSV
Genesis 21 in the MAAL
Genesis 21 in the MBV
Genesis 21 in the MBV2
Genesis 21 in the MHNT
Genesis 21 in the MKNFD
Genesis 21 in the MNG
Genesis 21 in the MNT
Genesis 21 in the MNT2
Genesis 21 in the MRS1T
Genesis 21 in the NAA
Genesis 21 in the NASB
Genesis 21 in the NBLA
Genesis 21 in the NBS
Genesis 21 in the NBVTP
Genesis 21 in the NET2
Genesis 21 in the NIV11
Genesis 21 in the NNT
Genesis 21 in the NNT2
Genesis 21 in the NNT3
Genesis 21 in the PDDPT
Genesis 21 in the PFNT
Genesis 21 in the RMNT
Genesis 21 in the SBIAS
Genesis 21 in the SBIBS
Genesis 21 in the SBIBS2
Genesis 21 in the SBICS
Genesis 21 in the SBIDS
Genesis 21 in the SBIGS
Genesis 21 in the SBIHS
Genesis 21 in the SBIIS
Genesis 21 in the SBIIS2
Genesis 21 in the SBIIS3
Genesis 21 in the SBIKS
Genesis 21 in the SBIKS2
Genesis 21 in the SBIMS
Genesis 21 in the SBIOS
Genesis 21 in the SBIPS
Genesis 21 in the SBISS
Genesis 21 in the SBITS
Genesis 21 in the SBITS2
Genesis 21 in the SBITS3
Genesis 21 in the SBITS4
Genesis 21 in the SBIUS
Genesis 21 in the SBIVS
Genesis 21 in the SBT
Genesis 21 in the SBT1E
Genesis 21 in the SCHL
Genesis 21 in the SNT
Genesis 21 in the SUSU
Genesis 21 in the SUSU2
Genesis 21 in the SYNO
Genesis 21 in the TBIAOTANT
Genesis 21 in the TBT1E
Genesis 21 in the TBT1E2
Genesis 21 in the TFTIP
Genesis 21 in the TFTU
Genesis 21 in the TGNTATF3T
Genesis 21 in the THAI
Genesis 21 in the TNFD
Genesis 21 in the TNT
Genesis 21 in the TNTIK
Genesis 21 in the TNTIL
Genesis 21 in the TNTIN
Genesis 21 in the TNTIP
Genesis 21 in the TNTIZ
Genesis 21 in the TOMA
Genesis 21 in the TTENT
Genesis 21 in the UBG
Genesis 21 in the UGV
Genesis 21 in the UGV2
Genesis 21 in the UGV3
Genesis 21 in the VBL
Genesis 21 in the VDCC
Genesis 21 in the YALU
Genesis 21 in the YAPE
Genesis 21 in the YBVTP
Genesis 21 in the ZBP