Genesis 27 (IRVK)

1 ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು. 2 ಇಸಾಕನು ಅವನಿಗೆ, “ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ. 3 ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು 4 ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು. 5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು. 6 ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ, 7 ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ. 8 ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು. 9 ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ. 10 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು. 11 ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು. 12 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು. 13 ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು. 14 ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು. 15 ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು. 16 ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು. 17 ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು. 18 ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು. 19 ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು, 20 ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು. 21 ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು. 22 ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು. 23 ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು. 24 ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು, 25 ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು. 26 ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, “ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು” ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು. 27 ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ,“ಆಹಾ, ನನ್ನ ಮಗನ ಸುವಾಸನೆಯು,ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು. 28 ದೇವರು ನಿನಗೆ ಆಕಾಶದ ಮಂಜನ್ನೂ,ಸಾರವುಳ್ಳ ಭೂಮಿಯನ್ನೂ ಕೊಟ್ಟುದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ. 29 ಜನಗಳು ನಿನ್ನನ್ನು ಆರಾಧಿಸಲಿ,ಜನಾಂಗಗಳು ನಿನಗೆ ಅಧೀನವಾಗಲಿ.ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು,ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ.ನಿನ್ನನ್ನು ಶಪಿಸುವವರಿಗೆ ಶಾಪವೂ,ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು. 30 ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು. 31 ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು. 32 ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು. 33 ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು. 34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು, 35 “ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು. 36 ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು, 37 ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು. 38 ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು, 39 ಅವನ ತಂದೆಯಾದ ಇಸಾಕನು ಅವನಿಗೆ,“ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜುಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು. 40 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು. 41 ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು. 42 ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ. 43 ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು. 44 ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು. 45 ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು. 46 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.

In Other Versions

Genesis 27 in the ANGEFD

Genesis 27 in the ANTPNG2D

Genesis 27 in the AS21

Genesis 27 in the BAGH

Genesis 27 in the BBPNG

Genesis 27 in the BBT1E

Genesis 27 in the BDS

Genesis 27 in the BEV

Genesis 27 in the BHAD

Genesis 27 in the BIB

Genesis 27 in the BLPT

Genesis 27 in the BNT

Genesis 27 in the BNTABOOT

Genesis 27 in the BNTLV

Genesis 27 in the BOATCB

Genesis 27 in the BOATCB2

Genesis 27 in the BOBCV

Genesis 27 in the BOCNT

Genesis 27 in the BOECS

Genesis 27 in the BOGWICC

Genesis 27 in the BOHCB

Genesis 27 in the BOHCV

Genesis 27 in the BOHLNT

Genesis 27 in the BOHNTLTAL

Genesis 27 in the BOICB

Genesis 27 in the BOILNTAP

Genesis 27 in the BOITCV

Genesis 27 in the BOKCV

Genesis 27 in the BOKCV2

Genesis 27 in the BOKHWOG

Genesis 27 in the BOKSSV

Genesis 27 in the BOLCB

Genesis 27 in the BOLCB2

Genesis 27 in the BOMCV

Genesis 27 in the BONAV

Genesis 27 in the BONCB

Genesis 27 in the BONLT

Genesis 27 in the BONUT2

Genesis 27 in the BOPLNT

Genesis 27 in the BOSCB

Genesis 27 in the BOSNC

Genesis 27 in the BOTLNT

Genesis 27 in the BOVCB

Genesis 27 in the BOYCB

Genesis 27 in the BPBB

Genesis 27 in the BPH

Genesis 27 in the BSB

Genesis 27 in the CCB

Genesis 27 in the CUV

Genesis 27 in the CUVS

Genesis 27 in the DBT

Genesis 27 in the DGDNT

Genesis 27 in the DHNT

Genesis 27 in the DNT

Genesis 27 in the ELBE

Genesis 27 in the EMTV

Genesis 27 in the ESV

Genesis 27 in the FBV

Genesis 27 in the FEB

Genesis 27 in the GGMNT

Genesis 27 in the GNT

Genesis 27 in the HARY

Genesis 27 in the HNT

Genesis 27 in the IRVA

Genesis 27 in the IRVB

Genesis 27 in the IRVG

Genesis 27 in the IRVH

Genesis 27 in the IRVM

Genesis 27 in the IRVM2

Genesis 27 in the IRVO

Genesis 27 in the IRVP

Genesis 27 in the IRVT

Genesis 27 in the IRVT2

Genesis 27 in the IRVU

Genesis 27 in the ISVN

Genesis 27 in the JSNT

Genesis 27 in the KAPI

Genesis 27 in the KBT1ETNIK

Genesis 27 in the KBV

Genesis 27 in the KJV

Genesis 27 in the KNFD

Genesis 27 in the LBA

Genesis 27 in the LBLA

Genesis 27 in the LNT

Genesis 27 in the LSV

Genesis 27 in the MAAL

Genesis 27 in the MBV

Genesis 27 in the MBV2

Genesis 27 in the MHNT

Genesis 27 in the MKNFD

Genesis 27 in the MNG

Genesis 27 in the MNT

Genesis 27 in the MNT2

Genesis 27 in the MRS1T

Genesis 27 in the NAA

Genesis 27 in the NASB

Genesis 27 in the NBLA

Genesis 27 in the NBS

Genesis 27 in the NBVTP

Genesis 27 in the NET2

Genesis 27 in the NIV11

Genesis 27 in the NNT

Genesis 27 in the NNT2

Genesis 27 in the NNT3

Genesis 27 in the PDDPT

Genesis 27 in the PFNT

Genesis 27 in the RMNT

Genesis 27 in the SBIAS

Genesis 27 in the SBIBS

Genesis 27 in the SBIBS2

Genesis 27 in the SBICS

Genesis 27 in the SBIDS

Genesis 27 in the SBIGS

Genesis 27 in the SBIHS

Genesis 27 in the SBIIS

Genesis 27 in the SBIIS2

Genesis 27 in the SBIIS3

Genesis 27 in the SBIKS

Genesis 27 in the SBIKS2

Genesis 27 in the SBIMS

Genesis 27 in the SBIOS

Genesis 27 in the SBIPS

Genesis 27 in the SBISS

Genesis 27 in the SBITS

Genesis 27 in the SBITS2

Genesis 27 in the SBITS3

Genesis 27 in the SBITS4

Genesis 27 in the SBIUS

Genesis 27 in the SBIVS

Genesis 27 in the SBT

Genesis 27 in the SBT1E

Genesis 27 in the SCHL

Genesis 27 in the SNT

Genesis 27 in the SUSU

Genesis 27 in the SUSU2

Genesis 27 in the SYNO

Genesis 27 in the TBIAOTANT

Genesis 27 in the TBT1E

Genesis 27 in the TBT1E2

Genesis 27 in the TFTIP

Genesis 27 in the TFTU

Genesis 27 in the TGNTATF3T

Genesis 27 in the THAI

Genesis 27 in the TNFD

Genesis 27 in the TNT

Genesis 27 in the TNTIK

Genesis 27 in the TNTIL

Genesis 27 in the TNTIN

Genesis 27 in the TNTIP

Genesis 27 in the TNTIZ

Genesis 27 in the TOMA

Genesis 27 in the TTENT

Genesis 27 in the UBG

Genesis 27 in the UGV

Genesis 27 in the UGV2

Genesis 27 in the UGV3

Genesis 27 in the VBL

Genesis 27 in the VDCC

Genesis 27 in the YALU

Genesis 27 in the YAPE

Genesis 27 in the YBVTP

Genesis 27 in the ZBP