Haggai 2 (IRVK)

1 ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು, 2 “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ, 3 ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು,ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ?ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ?ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’ 4 ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು;ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು;ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ. 5 ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು;ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’ 6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ,ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು; 7 ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು,ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. 8 ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. 9 ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 10 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು. 11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ, 12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು. 13 ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು. 14 ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ. 15 “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ; 16 ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು. 17 ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ. 18 “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. 19 ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.” 20 ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ, 21 “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ, 22 ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು;ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.” 23 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ,ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು,ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.

In Other Versions

Haggai 2 in the ANGEFD

Haggai 2 in the ANTPNG2D

Haggai 2 in the AS21

Haggai 2 in the BAGH

Haggai 2 in the BBPNG

Haggai 2 in the BBT1E

Haggai 2 in the BDS

Haggai 2 in the BEV

Haggai 2 in the BHAD

Haggai 2 in the BIB

Haggai 2 in the BLPT

Haggai 2 in the BNT

Haggai 2 in the BNTABOOT

Haggai 2 in the BNTLV

Haggai 2 in the BOATCB

Haggai 2 in the BOATCB2

Haggai 2 in the BOBCV

Haggai 2 in the BOCNT

Haggai 2 in the BOECS

Haggai 2 in the BOGWICC

Haggai 2 in the BOHCB

Haggai 2 in the BOHCV

Haggai 2 in the BOHLNT

Haggai 2 in the BOHNTLTAL

Haggai 2 in the BOICB

Haggai 2 in the BOILNTAP

Haggai 2 in the BOITCV

Haggai 2 in the BOKCV

Haggai 2 in the BOKCV2

Haggai 2 in the BOKHWOG

Haggai 2 in the BOKSSV

Haggai 2 in the BOLCB

Haggai 2 in the BOLCB2

Haggai 2 in the BOMCV

Haggai 2 in the BONAV

Haggai 2 in the BONCB

Haggai 2 in the BONLT

Haggai 2 in the BONUT2

Haggai 2 in the BOPLNT

Haggai 2 in the BOSCB

Haggai 2 in the BOSNC

Haggai 2 in the BOTLNT

Haggai 2 in the BOVCB

Haggai 2 in the BOYCB

Haggai 2 in the BPBB

Haggai 2 in the BPH

Haggai 2 in the BSB

Haggai 2 in the CCB

Haggai 2 in the CUV

Haggai 2 in the CUVS

Haggai 2 in the DBT

Haggai 2 in the DGDNT

Haggai 2 in the DHNT

Haggai 2 in the DNT

Haggai 2 in the ELBE

Haggai 2 in the EMTV

Haggai 2 in the ESV

Haggai 2 in the FBV

Haggai 2 in the FEB

Haggai 2 in the GGMNT

Haggai 2 in the GNT

Haggai 2 in the HARY

Haggai 2 in the HNT

Haggai 2 in the IRVA

Haggai 2 in the IRVB

Haggai 2 in the IRVG

Haggai 2 in the IRVH

Haggai 2 in the IRVM

Haggai 2 in the IRVM2

Haggai 2 in the IRVO

Haggai 2 in the IRVP

Haggai 2 in the IRVT

Haggai 2 in the IRVT2

Haggai 2 in the IRVU

Haggai 2 in the ISVN

Haggai 2 in the JSNT

Haggai 2 in the KAPI

Haggai 2 in the KBT1ETNIK

Haggai 2 in the KBV

Haggai 2 in the KJV

Haggai 2 in the KNFD

Haggai 2 in the LBA

Haggai 2 in the LBLA

Haggai 2 in the LNT

Haggai 2 in the LSV

Haggai 2 in the MAAL

Haggai 2 in the MBV

Haggai 2 in the MBV2

Haggai 2 in the MHNT

Haggai 2 in the MKNFD

Haggai 2 in the MNG

Haggai 2 in the MNT

Haggai 2 in the MNT2

Haggai 2 in the MRS1T

Haggai 2 in the NAA

Haggai 2 in the NASB

Haggai 2 in the NBLA

Haggai 2 in the NBS

Haggai 2 in the NBVTP

Haggai 2 in the NET2

Haggai 2 in the NIV11

Haggai 2 in the NNT

Haggai 2 in the NNT2

Haggai 2 in the NNT3

Haggai 2 in the PDDPT

Haggai 2 in the PFNT

Haggai 2 in the RMNT

Haggai 2 in the SBIAS

Haggai 2 in the SBIBS

Haggai 2 in the SBIBS2

Haggai 2 in the SBICS

Haggai 2 in the SBIDS

Haggai 2 in the SBIGS

Haggai 2 in the SBIHS

Haggai 2 in the SBIIS

Haggai 2 in the SBIIS2

Haggai 2 in the SBIIS3

Haggai 2 in the SBIKS

Haggai 2 in the SBIKS2

Haggai 2 in the SBIMS

Haggai 2 in the SBIOS

Haggai 2 in the SBIPS

Haggai 2 in the SBISS

Haggai 2 in the SBITS

Haggai 2 in the SBITS2

Haggai 2 in the SBITS3

Haggai 2 in the SBITS4

Haggai 2 in the SBIUS

Haggai 2 in the SBIVS

Haggai 2 in the SBT

Haggai 2 in the SBT1E

Haggai 2 in the SCHL

Haggai 2 in the SNT

Haggai 2 in the SUSU

Haggai 2 in the SUSU2

Haggai 2 in the SYNO

Haggai 2 in the TBIAOTANT

Haggai 2 in the TBT1E

Haggai 2 in the TBT1E2

Haggai 2 in the TFTIP

Haggai 2 in the TFTU

Haggai 2 in the TGNTATF3T

Haggai 2 in the THAI

Haggai 2 in the TNFD

Haggai 2 in the TNT

Haggai 2 in the TNTIK

Haggai 2 in the TNTIL

Haggai 2 in the TNTIN

Haggai 2 in the TNTIP

Haggai 2 in the TNTIZ

Haggai 2 in the TOMA

Haggai 2 in the TTENT

Haggai 2 in the UBG

Haggai 2 in the UGV

Haggai 2 in the UGV2

Haggai 2 in the UGV3

Haggai 2 in the VBL

Haggai 2 in the VDCC

Haggai 2 in the YALU

Haggai 2 in the YAPE

Haggai 2 in the YBVTP

Haggai 2 in the ZBP