Hebrews 7 (IRVK)

1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು. 2 ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ. 3 ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು. 4 ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ. 5 ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ. 6 ಆದರೆ ಮೆಲ್ಕಿಜೆದೇಕನು ಲೇವಿಯ ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು. 7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ. 8 ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು. 9 ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು. 10 ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು. 11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು? 12 ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ. 13 ಆದರೆ ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ. 14 ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ. 15 15-16 ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ. 17 ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ. 18 ಯಾಕೆಂದರೆ ಮೊದಲಿದ್ದ ಆಜ್ಞೆಯು ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು. 19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ. 20 ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು. 21 ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತುತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ. 22 ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು. 23 ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು. 24 ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು. 25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. 26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. 27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28 ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.

In Other Versions

Hebrews 7 in the ANGEFD

Hebrews 7 in the ANTPNG2D

Hebrews 7 in the AS21

Hebrews 7 in the BAGH

Hebrews 7 in the BBPNG

Hebrews 7 in the BBT1E

Hebrews 7 in the BDS

Hebrews 7 in the BEV

Hebrews 7 in the BHAD

Hebrews 7 in the BIB

Hebrews 7 in the BLPT

Hebrews 7 in the BNT

Hebrews 7 in the BNTABOOT

Hebrews 7 in the BNTLV

Hebrews 7 in the BOATCB

Hebrews 7 in the BOATCB2

Hebrews 7 in the BOBCV

Hebrews 7 in the BOCNT

Hebrews 7 in the BOECS

Hebrews 7 in the BOGWICC

Hebrews 7 in the BOHCB

Hebrews 7 in the BOHCV

Hebrews 7 in the BOHLNT

Hebrews 7 in the BOHNTLTAL

Hebrews 7 in the BOICB

Hebrews 7 in the BOILNTAP

Hebrews 7 in the BOITCV

Hebrews 7 in the BOKCV

Hebrews 7 in the BOKCV2

Hebrews 7 in the BOKHWOG

Hebrews 7 in the BOKSSV

Hebrews 7 in the BOLCB

Hebrews 7 in the BOLCB2

Hebrews 7 in the BOMCV

Hebrews 7 in the BONAV

Hebrews 7 in the BONCB

Hebrews 7 in the BONLT

Hebrews 7 in the BONUT2

Hebrews 7 in the BOPLNT

Hebrews 7 in the BOSCB

Hebrews 7 in the BOSNC

Hebrews 7 in the BOTLNT

Hebrews 7 in the BOVCB

Hebrews 7 in the BOYCB

Hebrews 7 in the BPBB

Hebrews 7 in the BPH

Hebrews 7 in the BSB

Hebrews 7 in the CCB

Hebrews 7 in the CUV

Hebrews 7 in the CUVS

Hebrews 7 in the DBT

Hebrews 7 in the DGDNT

Hebrews 7 in the DHNT

Hebrews 7 in the DNT

Hebrews 7 in the ELBE

Hebrews 7 in the EMTV

Hebrews 7 in the ESV

Hebrews 7 in the FBV

Hebrews 7 in the FEB

Hebrews 7 in the GGMNT

Hebrews 7 in the GNT

Hebrews 7 in the HARY

Hebrews 7 in the HNT

Hebrews 7 in the IRVA

Hebrews 7 in the IRVB

Hebrews 7 in the IRVG

Hebrews 7 in the IRVH

Hebrews 7 in the IRVM

Hebrews 7 in the IRVM2

Hebrews 7 in the IRVO

Hebrews 7 in the IRVP

Hebrews 7 in the IRVT

Hebrews 7 in the IRVT2

Hebrews 7 in the IRVU

Hebrews 7 in the ISVN

Hebrews 7 in the JSNT

Hebrews 7 in the KAPI

Hebrews 7 in the KBT1ETNIK

Hebrews 7 in the KBV

Hebrews 7 in the KJV

Hebrews 7 in the KNFD

Hebrews 7 in the LBA

Hebrews 7 in the LBLA

Hebrews 7 in the LNT

Hebrews 7 in the LSV

Hebrews 7 in the MAAL

Hebrews 7 in the MBV

Hebrews 7 in the MBV2

Hebrews 7 in the MHNT

Hebrews 7 in the MKNFD

Hebrews 7 in the MNG

Hebrews 7 in the MNT

Hebrews 7 in the MNT2

Hebrews 7 in the MRS1T

Hebrews 7 in the NAA

Hebrews 7 in the NASB

Hebrews 7 in the NBLA

Hebrews 7 in the NBS

Hebrews 7 in the NBVTP

Hebrews 7 in the NET2

Hebrews 7 in the NIV11

Hebrews 7 in the NNT

Hebrews 7 in the NNT2

Hebrews 7 in the NNT3

Hebrews 7 in the PDDPT

Hebrews 7 in the PFNT

Hebrews 7 in the RMNT

Hebrews 7 in the SBIAS

Hebrews 7 in the SBIBS

Hebrews 7 in the SBIBS2

Hebrews 7 in the SBICS

Hebrews 7 in the SBIDS

Hebrews 7 in the SBIGS

Hebrews 7 in the SBIHS

Hebrews 7 in the SBIIS

Hebrews 7 in the SBIIS2

Hebrews 7 in the SBIIS3

Hebrews 7 in the SBIKS

Hebrews 7 in the SBIKS2

Hebrews 7 in the SBIMS

Hebrews 7 in the SBIOS

Hebrews 7 in the SBIPS

Hebrews 7 in the SBISS

Hebrews 7 in the SBITS

Hebrews 7 in the SBITS2

Hebrews 7 in the SBITS3

Hebrews 7 in the SBITS4

Hebrews 7 in the SBIUS

Hebrews 7 in the SBIVS

Hebrews 7 in the SBT

Hebrews 7 in the SBT1E

Hebrews 7 in the SCHL

Hebrews 7 in the SNT

Hebrews 7 in the SUSU

Hebrews 7 in the SUSU2

Hebrews 7 in the SYNO

Hebrews 7 in the TBIAOTANT

Hebrews 7 in the TBT1E

Hebrews 7 in the TBT1E2

Hebrews 7 in the TFTIP

Hebrews 7 in the TFTU

Hebrews 7 in the TGNTATF3T

Hebrews 7 in the THAI

Hebrews 7 in the TNFD

Hebrews 7 in the TNT

Hebrews 7 in the TNTIK

Hebrews 7 in the TNTIL

Hebrews 7 in the TNTIN

Hebrews 7 in the TNTIP

Hebrews 7 in the TNTIZ

Hebrews 7 in the TOMA

Hebrews 7 in the TTENT

Hebrews 7 in the UBG

Hebrews 7 in the UGV

Hebrews 7 in the UGV2

Hebrews 7 in the UGV3

Hebrews 7 in the VBL

Hebrews 7 in the VDCC

Hebrews 7 in the YALU

Hebrews 7 in the YAPE

Hebrews 7 in the YBVTP

Hebrews 7 in the ZBP