Leviticus 23 (IRVK)

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ. 3 “‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. 4 “‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು. 5 “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು. 6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. 7 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. 8 ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು. 9 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. 11 ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು. 12 ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು. 13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ. 14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ. 15 “‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು. 16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು. 17 ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು. 18 ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು. 19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು. 20 ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು. 21 ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. 22 “‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು. 23 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 24 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು. 25 ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು. 26 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು. 28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು. 29 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. 30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು. 31 ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. 32 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು. 33 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 34 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. 35 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು. 36 ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು. 37 “‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. 38 ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು. 39 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು. 40 ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು. 41 ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು. 42 ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು. 43 ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು. 44 ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.

In Other Versions

Leviticus 23 in the ANGEFD

Leviticus 23 in the ANTPNG2D

Leviticus 23 in the AS21

Leviticus 23 in the BAGH

Leviticus 23 in the BBPNG

Leviticus 23 in the BBT1E

Leviticus 23 in the BDS

Leviticus 23 in the BEV

Leviticus 23 in the BHAD

Leviticus 23 in the BIB

Leviticus 23 in the BLPT

Leviticus 23 in the BNT

Leviticus 23 in the BNTABOOT

Leviticus 23 in the BNTLV

Leviticus 23 in the BOATCB

Leviticus 23 in the BOATCB2

Leviticus 23 in the BOBCV

Leviticus 23 in the BOCNT

Leviticus 23 in the BOECS

Leviticus 23 in the BOGWICC

Leviticus 23 in the BOHCB

Leviticus 23 in the BOHCV

Leviticus 23 in the BOHLNT

Leviticus 23 in the BOHNTLTAL

Leviticus 23 in the BOICB

Leviticus 23 in the BOILNTAP

Leviticus 23 in the BOITCV

Leviticus 23 in the BOKCV

Leviticus 23 in the BOKCV2

Leviticus 23 in the BOKHWOG

Leviticus 23 in the BOKSSV

Leviticus 23 in the BOLCB

Leviticus 23 in the BOLCB2

Leviticus 23 in the BOMCV

Leviticus 23 in the BONAV

Leviticus 23 in the BONCB

Leviticus 23 in the BONLT

Leviticus 23 in the BONUT2

Leviticus 23 in the BOPLNT

Leviticus 23 in the BOSCB

Leviticus 23 in the BOSNC

Leviticus 23 in the BOTLNT

Leviticus 23 in the BOVCB

Leviticus 23 in the BOYCB

Leviticus 23 in the BPBB

Leviticus 23 in the BPH

Leviticus 23 in the BSB

Leviticus 23 in the CCB

Leviticus 23 in the CUV

Leviticus 23 in the CUVS

Leviticus 23 in the DBT

Leviticus 23 in the DGDNT

Leviticus 23 in the DHNT

Leviticus 23 in the DNT

Leviticus 23 in the ELBE

Leviticus 23 in the EMTV

Leviticus 23 in the ESV

Leviticus 23 in the FBV

Leviticus 23 in the FEB

Leviticus 23 in the GGMNT

Leviticus 23 in the GNT

Leviticus 23 in the HARY

Leviticus 23 in the HNT

Leviticus 23 in the IRVA

Leviticus 23 in the IRVB

Leviticus 23 in the IRVG

Leviticus 23 in the IRVH

Leviticus 23 in the IRVM

Leviticus 23 in the IRVM2

Leviticus 23 in the IRVO

Leviticus 23 in the IRVP

Leviticus 23 in the IRVT

Leviticus 23 in the IRVT2

Leviticus 23 in the IRVU

Leviticus 23 in the ISVN

Leviticus 23 in the JSNT

Leviticus 23 in the KAPI

Leviticus 23 in the KBT1ETNIK

Leviticus 23 in the KBV

Leviticus 23 in the KJV

Leviticus 23 in the KNFD

Leviticus 23 in the LBA

Leviticus 23 in the LBLA

Leviticus 23 in the LNT

Leviticus 23 in the LSV

Leviticus 23 in the MAAL

Leviticus 23 in the MBV

Leviticus 23 in the MBV2

Leviticus 23 in the MHNT

Leviticus 23 in the MKNFD

Leviticus 23 in the MNG

Leviticus 23 in the MNT

Leviticus 23 in the MNT2

Leviticus 23 in the MRS1T

Leviticus 23 in the NAA

Leviticus 23 in the NASB

Leviticus 23 in the NBLA

Leviticus 23 in the NBS

Leviticus 23 in the NBVTP

Leviticus 23 in the NET2

Leviticus 23 in the NIV11

Leviticus 23 in the NNT

Leviticus 23 in the NNT2

Leviticus 23 in the NNT3

Leviticus 23 in the PDDPT

Leviticus 23 in the PFNT

Leviticus 23 in the RMNT

Leviticus 23 in the SBIAS

Leviticus 23 in the SBIBS

Leviticus 23 in the SBIBS2

Leviticus 23 in the SBICS

Leviticus 23 in the SBIDS

Leviticus 23 in the SBIGS

Leviticus 23 in the SBIHS

Leviticus 23 in the SBIIS

Leviticus 23 in the SBIIS2

Leviticus 23 in the SBIIS3

Leviticus 23 in the SBIKS

Leviticus 23 in the SBIKS2

Leviticus 23 in the SBIMS

Leviticus 23 in the SBIOS

Leviticus 23 in the SBIPS

Leviticus 23 in the SBISS

Leviticus 23 in the SBITS

Leviticus 23 in the SBITS2

Leviticus 23 in the SBITS3

Leviticus 23 in the SBITS4

Leviticus 23 in the SBIUS

Leviticus 23 in the SBIVS

Leviticus 23 in the SBT

Leviticus 23 in the SBT1E

Leviticus 23 in the SCHL

Leviticus 23 in the SNT

Leviticus 23 in the SUSU

Leviticus 23 in the SUSU2

Leviticus 23 in the SYNO

Leviticus 23 in the TBIAOTANT

Leviticus 23 in the TBT1E

Leviticus 23 in the TBT1E2

Leviticus 23 in the TFTIP

Leviticus 23 in the TFTU

Leviticus 23 in the TGNTATF3T

Leviticus 23 in the THAI

Leviticus 23 in the TNFD

Leviticus 23 in the TNT

Leviticus 23 in the TNTIK

Leviticus 23 in the TNTIL

Leviticus 23 in the TNTIN

Leviticus 23 in the TNTIP

Leviticus 23 in the TNTIZ

Leviticus 23 in the TOMA

Leviticus 23 in the TTENT

Leviticus 23 in the UBG

Leviticus 23 in the UGV

Leviticus 23 in the UGV2

Leviticus 23 in the UGV3

Leviticus 23 in the VBL

Leviticus 23 in the VDCC

Leviticus 23 in the YALU

Leviticus 23 in the YAPE

Leviticus 23 in the YBVTP

Leviticus 23 in the ZBP