Leviticus 8 (IRVK)

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು, 3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು. 4 ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು. 5 ಆಗ ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು” ಎಂದು ಹೇಳಿದನು. 6 ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು. 7 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು. 8 ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು. 9 ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. 10 ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. 11 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. 12 ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು. 13 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು. 14 ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು. 15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು. 16 ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು. 17 ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು. 18 ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. 19 ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು. 20 ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು. 21 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು. 22 ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು. 23 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು. 24 ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು. 25 ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು, 26 ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು. 27 ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು. 28 ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು. 29 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು. 30 ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು. 31 ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ. 32 ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. 33 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು. 34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ. 35 ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು. 36 ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.

In Other Versions

Leviticus 8 in the ANGEFD

Leviticus 8 in the ANTPNG2D

Leviticus 8 in the AS21

Leviticus 8 in the BAGH

Leviticus 8 in the BBPNG

Leviticus 8 in the BBT1E

Leviticus 8 in the BDS

Leviticus 8 in the BEV

Leviticus 8 in the BHAD

Leviticus 8 in the BIB

Leviticus 8 in the BLPT

Leviticus 8 in the BNT

Leviticus 8 in the BNTABOOT

Leviticus 8 in the BNTLV

Leviticus 8 in the BOATCB

Leviticus 8 in the BOATCB2

Leviticus 8 in the BOBCV

Leviticus 8 in the BOCNT

Leviticus 8 in the BOECS

Leviticus 8 in the BOGWICC

Leviticus 8 in the BOHCB

Leviticus 8 in the BOHCV

Leviticus 8 in the BOHLNT

Leviticus 8 in the BOHNTLTAL

Leviticus 8 in the BOICB

Leviticus 8 in the BOILNTAP

Leviticus 8 in the BOITCV

Leviticus 8 in the BOKCV

Leviticus 8 in the BOKCV2

Leviticus 8 in the BOKHWOG

Leviticus 8 in the BOKSSV

Leviticus 8 in the BOLCB

Leviticus 8 in the BOLCB2

Leviticus 8 in the BOMCV

Leviticus 8 in the BONAV

Leviticus 8 in the BONCB

Leviticus 8 in the BONLT

Leviticus 8 in the BONUT2

Leviticus 8 in the BOPLNT

Leviticus 8 in the BOSCB

Leviticus 8 in the BOSNC

Leviticus 8 in the BOTLNT

Leviticus 8 in the BOVCB

Leviticus 8 in the BOYCB

Leviticus 8 in the BPBB

Leviticus 8 in the BPH

Leviticus 8 in the BSB

Leviticus 8 in the CCB

Leviticus 8 in the CUV

Leviticus 8 in the CUVS

Leviticus 8 in the DBT

Leviticus 8 in the DGDNT

Leviticus 8 in the DHNT

Leviticus 8 in the DNT

Leviticus 8 in the ELBE

Leviticus 8 in the EMTV

Leviticus 8 in the ESV

Leviticus 8 in the FBV

Leviticus 8 in the FEB

Leviticus 8 in the GGMNT

Leviticus 8 in the GNT

Leviticus 8 in the HARY

Leviticus 8 in the HNT

Leviticus 8 in the IRVA

Leviticus 8 in the IRVB

Leviticus 8 in the IRVG

Leviticus 8 in the IRVH

Leviticus 8 in the IRVM

Leviticus 8 in the IRVM2

Leviticus 8 in the IRVO

Leviticus 8 in the IRVP

Leviticus 8 in the IRVT

Leviticus 8 in the IRVT2

Leviticus 8 in the IRVU

Leviticus 8 in the ISVN

Leviticus 8 in the JSNT

Leviticus 8 in the KAPI

Leviticus 8 in the KBT1ETNIK

Leviticus 8 in the KBV

Leviticus 8 in the KJV

Leviticus 8 in the KNFD

Leviticus 8 in the LBA

Leviticus 8 in the LBLA

Leviticus 8 in the LNT

Leviticus 8 in the LSV

Leviticus 8 in the MAAL

Leviticus 8 in the MBV

Leviticus 8 in the MBV2

Leviticus 8 in the MHNT

Leviticus 8 in the MKNFD

Leviticus 8 in the MNG

Leviticus 8 in the MNT

Leviticus 8 in the MNT2

Leviticus 8 in the MRS1T

Leviticus 8 in the NAA

Leviticus 8 in the NASB

Leviticus 8 in the NBLA

Leviticus 8 in the NBS

Leviticus 8 in the NBVTP

Leviticus 8 in the NET2

Leviticus 8 in the NIV11

Leviticus 8 in the NNT

Leviticus 8 in the NNT2

Leviticus 8 in the NNT3

Leviticus 8 in the PDDPT

Leviticus 8 in the PFNT

Leviticus 8 in the RMNT

Leviticus 8 in the SBIAS

Leviticus 8 in the SBIBS

Leviticus 8 in the SBIBS2

Leviticus 8 in the SBICS

Leviticus 8 in the SBIDS

Leviticus 8 in the SBIGS

Leviticus 8 in the SBIHS

Leviticus 8 in the SBIIS

Leviticus 8 in the SBIIS2

Leviticus 8 in the SBIIS3

Leviticus 8 in the SBIKS

Leviticus 8 in the SBIKS2

Leviticus 8 in the SBIMS

Leviticus 8 in the SBIOS

Leviticus 8 in the SBIPS

Leviticus 8 in the SBISS

Leviticus 8 in the SBITS

Leviticus 8 in the SBITS2

Leviticus 8 in the SBITS3

Leviticus 8 in the SBITS4

Leviticus 8 in the SBIUS

Leviticus 8 in the SBIVS

Leviticus 8 in the SBT

Leviticus 8 in the SBT1E

Leviticus 8 in the SCHL

Leviticus 8 in the SNT

Leviticus 8 in the SUSU

Leviticus 8 in the SUSU2

Leviticus 8 in the SYNO

Leviticus 8 in the TBIAOTANT

Leviticus 8 in the TBT1E

Leviticus 8 in the TBT1E2

Leviticus 8 in the TFTIP

Leviticus 8 in the TFTU

Leviticus 8 in the TGNTATF3T

Leviticus 8 in the THAI

Leviticus 8 in the TNFD

Leviticus 8 in the TNT

Leviticus 8 in the TNTIK

Leviticus 8 in the TNTIL

Leviticus 8 in the TNTIN

Leviticus 8 in the TNTIP

Leviticus 8 in the TNTIZ

Leviticus 8 in the TOMA

Leviticus 8 in the TTENT

Leviticus 8 in the UBG

Leviticus 8 in the UGV

Leviticus 8 in the UGV2

Leviticus 8 in the UGV3

Leviticus 8 in the VBL

Leviticus 8 in the VDCC

Leviticus 8 in the YALU

Leviticus 8 in the YAPE

Leviticus 8 in the YBVTP

Leviticus 8 in the ZBP