Numbers 28 (IRVK)

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’ 3 ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು. 4 ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು. 5 ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು. 6 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು. 7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು. 8 ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು. 9 “‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. 10 ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು. 11 “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. 12 ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು. 13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ. 14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು. 15 ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು. 16 “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು. 17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. 18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. 19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು. 20 ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು, 21 ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು, 22 ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. 23 ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. 24 ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು. 25 ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. 26 “‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು. 27 ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ, 28 ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು, 29 ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ, 30 ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. 31 ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”

In Other Versions

Numbers 28 in the ANGEFD

Numbers 28 in the ANTPNG2D

Numbers 28 in the AS21

Numbers 28 in the BAGH

Numbers 28 in the BBPNG

Numbers 28 in the BBT1E

Numbers 28 in the BDS

Numbers 28 in the BEV

Numbers 28 in the BHAD

Numbers 28 in the BIB

Numbers 28 in the BLPT

Numbers 28 in the BNT

Numbers 28 in the BNTABOOT

Numbers 28 in the BNTLV

Numbers 28 in the BOATCB

Numbers 28 in the BOATCB2

Numbers 28 in the BOBCV

Numbers 28 in the BOCNT

Numbers 28 in the BOECS

Numbers 28 in the BOGWICC

Numbers 28 in the BOHCB

Numbers 28 in the BOHCV

Numbers 28 in the BOHLNT

Numbers 28 in the BOHNTLTAL

Numbers 28 in the BOICB

Numbers 28 in the BOILNTAP

Numbers 28 in the BOITCV

Numbers 28 in the BOKCV

Numbers 28 in the BOKCV2

Numbers 28 in the BOKHWOG

Numbers 28 in the BOKSSV

Numbers 28 in the BOLCB

Numbers 28 in the BOLCB2

Numbers 28 in the BOMCV

Numbers 28 in the BONAV

Numbers 28 in the BONCB

Numbers 28 in the BONLT

Numbers 28 in the BONUT2

Numbers 28 in the BOPLNT

Numbers 28 in the BOSCB

Numbers 28 in the BOSNC

Numbers 28 in the BOTLNT

Numbers 28 in the BOVCB

Numbers 28 in the BOYCB

Numbers 28 in the BPBB

Numbers 28 in the BPH

Numbers 28 in the BSB

Numbers 28 in the CCB

Numbers 28 in the CUV

Numbers 28 in the CUVS

Numbers 28 in the DBT

Numbers 28 in the DGDNT

Numbers 28 in the DHNT

Numbers 28 in the DNT

Numbers 28 in the ELBE

Numbers 28 in the EMTV

Numbers 28 in the ESV

Numbers 28 in the FBV

Numbers 28 in the FEB

Numbers 28 in the GGMNT

Numbers 28 in the GNT

Numbers 28 in the HARY

Numbers 28 in the HNT

Numbers 28 in the IRVA

Numbers 28 in the IRVB

Numbers 28 in the IRVG

Numbers 28 in the IRVH

Numbers 28 in the IRVM

Numbers 28 in the IRVM2

Numbers 28 in the IRVO

Numbers 28 in the IRVP

Numbers 28 in the IRVT

Numbers 28 in the IRVT2

Numbers 28 in the IRVU

Numbers 28 in the ISVN

Numbers 28 in the JSNT

Numbers 28 in the KAPI

Numbers 28 in the KBT1ETNIK

Numbers 28 in the KBV

Numbers 28 in the KJV

Numbers 28 in the KNFD

Numbers 28 in the LBA

Numbers 28 in the LBLA

Numbers 28 in the LNT

Numbers 28 in the LSV

Numbers 28 in the MAAL

Numbers 28 in the MBV

Numbers 28 in the MBV2

Numbers 28 in the MHNT

Numbers 28 in the MKNFD

Numbers 28 in the MNG

Numbers 28 in the MNT

Numbers 28 in the MNT2

Numbers 28 in the MRS1T

Numbers 28 in the NAA

Numbers 28 in the NASB

Numbers 28 in the NBLA

Numbers 28 in the NBS

Numbers 28 in the NBVTP

Numbers 28 in the NET2

Numbers 28 in the NIV11

Numbers 28 in the NNT

Numbers 28 in the NNT2

Numbers 28 in the NNT3

Numbers 28 in the PDDPT

Numbers 28 in the PFNT

Numbers 28 in the RMNT

Numbers 28 in the SBIAS

Numbers 28 in the SBIBS

Numbers 28 in the SBIBS2

Numbers 28 in the SBICS

Numbers 28 in the SBIDS

Numbers 28 in the SBIGS

Numbers 28 in the SBIHS

Numbers 28 in the SBIIS

Numbers 28 in the SBIIS2

Numbers 28 in the SBIIS3

Numbers 28 in the SBIKS

Numbers 28 in the SBIKS2

Numbers 28 in the SBIMS

Numbers 28 in the SBIOS

Numbers 28 in the SBIPS

Numbers 28 in the SBISS

Numbers 28 in the SBITS

Numbers 28 in the SBITS2

Numbers 28 in the SBITS3

Numbers 28 in the SBITS4

Numbers 28 in the SBIUS

Numbers 28 in the SBIVS

Numbers 28 in the SBT

Numbers 28 in the SBT1E

Numbers 28 in the SCHL

Numbers 28 in the SNT

Numbers 28 in the SUSU

Numbers 28 in the SUSU2

Numbers 28 in the SYNO

Numbers 28 in the TBIAOTANT

Numbers 28 in the TBT1E

Numbers 28 in the TBT1E2

Numbers 28 in the TFTIP

Numbers 28 in the TFTU

Numbers 28 in the TGNTATF3T

Numbers 28 in the THAI

Numbers 28 in the TNFD

Numbers 28 in the TNT

Numbers 28 in the TNTIK

Numbers 28 in the TNTIL

Numbers 28 in the TNTIN

Numbers 28 in the TNTIP

Numbers 28 in the TNTIZ

Numbers 28 in the TOMA

Numbers 28 in the TTENT

Numbers 28 in the UBG

Numbers 28 in the UGV

Numbers 28 in the UGV2

Numbers 28 in the UGV3

Numbers 28 in the VBL

Numbers 28 in the VDCC

Numbers 28 in the YALU

Numbers 28 in the YAPE

Numbers 28 in the YBVTP

Numbers 28 in the ZBP