Numbers 29 (IRVK)
1 “‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು. 2 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು. 3 ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು, 4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು, 5 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. 6 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು. 7 “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು. 8 ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು. 9 ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು, 10 ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು, 11 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. 12 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು. 13 ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ, 14 ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು, 15 ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು. 16 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು. 17 “‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. 18 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, 19 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 20 “‘ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ, 21 ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 22 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 23 “‘ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 24 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 25 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 26 “‘ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 27 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 28 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 29 “‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 30 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 31 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 32 “‘ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 33 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 34 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 35 “‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. 36 ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 37 “‘ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು 38 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 39 “‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’” 40 ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.