Psalms 101 (IRVK)
undefined ದಾವೀದನ ಕೀರ್ತನೆ. 1 ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;ಯೆಹೋವನೇ, ನಿನ್ನನ್ನು ಕೊಂಡಾಡುವೆನು. 2 ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು;ನನಗೆ ಯಾವಾಗ ದರ್ಶನಕೊಡುವಿ?ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. 3 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ;ದುರಾಚಾರವನ್ನು ಹಗೆಮಾಡುತ್ತೇನೆ,ಅದರ ಗೊಡವೆಯೇ ನನಗೆ ಬೇಡ. 4 ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ;ಕೆಟ್ಟತನವನ್ನು ಅರಿಯದಿರುವೆನು. 5 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು;ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. 6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು,ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು. 7 ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು;ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. 8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.