Psalms 13 (IRVK)
undefined ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. 1 ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ?ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ? 2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು,ಆಲೋಚಿಸಿಕೊಳ್ಳುತ್ತಾ ಇರಬೇಕು?ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? 3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು;ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. 4 ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು;ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. 5 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. 6 ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.