Psalms 130 (IRVK)
undefined ಯಾತ್ರಾಗೀತೆ. 1 ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. 2 ಕರ್ತನೇ, ನನ್ನ ಮೊರೆಯನ್ನು ಕೇಳು;ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. 3 ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? 4 ನೀನು ಪಾಪವನ್ನು ಕ್ಷಮಿಸುವವನಾದುದರಿಂದ,ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. 5 ನಾನು ಯೆಹೋವನನ್ನು ಎದುರುನೋಡುತ್ತೇನೆ;ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. 6 ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. 7 ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು;ಯೆಹೋವನು ಕೃಪಾಸಂಪನ್ನನು;ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. 8 ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.