Psalms 15 (IRVK)
undefined ದಾವೀದನ ಕೀರ್ತನೆ. 1 ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು?ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? 2 ಅವನು ಸಜ್ಜನನೂ, ನೀತಿವಂತನೂ,ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 3 ಅವನು ಚಾಡಿಯನ್ನು ಹೇಳದವನೂ,ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,ಯಾರನ್ನೂ ನಿಂದಿಸದವನೂ ಆಗಿರಬೇಕು. 4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ,ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ,ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 5 ಅವನು ಸಾಲಕ್ಕೆ ಬಡ್ಡಿ ಕೇಳದವನೂ,ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು.ಇಂಥವನು ಎಂದಿಗೂ ಕದಲುವುದಿಲ್ಲ.