Psalms 28 (IRVK)
undefined ದಾವೀದನ ಕೀರ್ತನೆ. 1 ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ;ಕೇಳದೆ ಇರಬೇಡ.ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. 2 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ;ನನ್ನ ವಿಜ್ಞಾಪನೆಯನ್ನು ಲಾಲಿಸು. 3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂನನ್ನನ್ನೂ ಎಳೆದುಕೊಂಡು ಹೋಗಬೇಡ.ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ,ಒಳಗೆ ಕೇಡಾಗಲಿ ಎಂದು ಯೋಚಿಸುವವರು. 4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. 5 ಅವರು ಯೆಹೋವನ ಕಾರ್ಯಗಳನ್ನೂ ಮತ್ತುಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು;ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. 6 ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ;ಆತನಿಗೆ ಸ್ತೋತ್ರವಾಗಲಿ. 7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.ಆದಕಾರಣ ನನ್ನ ಹೃದಯವು ಹರ್ಷಿಸುವುದು;ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. 8 ಯೆಹೋವನು ತನ್ನ ಜನರಿಗೆ ಬಲವೂ,ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. 9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು;ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು.ನೀನು ಅವರ ಕುರುಬನಾಗಿರು;ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.