Psalms 32 (IRVK)
undefined ದಾವೀದನ ಪದ್ಯ. 1 ಯಾರ ದ್ರೋಹವು ಪರಿಹಾರವಾಗಿದೆಯೋ,ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. 2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ?ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. 3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು. 4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ 5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡುನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ 6 ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ;ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. 7 ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ;ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ 8 ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ. 9 ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾಹೇಸರಗತ್ತೆಯಂತಾಗಲಿ ಇರಬೇಡಿರಿ;ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ. 10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು;ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. 11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ;ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.