Psalms 67 (IRVK)
undefined ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. 1 ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ;ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ 2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ,ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 3 ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ;ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ,ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ 5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ;ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 6 ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ.ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; 7 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ.ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.