Psalms 70 (IRVK)
undefined ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. 1 ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು.ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. 2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. 3 ಆಹಾ, ಆಹಾ ಎಂದು ಪರಿಹಾಸ್ಯಮಾಡುವವರುತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. 4 ನಿನ್ನ ದರ್ಶನವನ್ನು ಕೋರುವವರೆಲ್ಲರುನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. 5 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;ದೇವರೇ, ಬೇಗನೆ ಬಾ.ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.